ಶ್ರೀನಿವಾಸಪುರ: ತಾಲ್ಲೂಕಿನಲ್ಲಿ  ಮನೆ ನಿರ್ಮಿಸಿಕೊಳ್ಳಲು ತರುವ ಮರಳನ್ನು ಅಧಿಕಾರಿಗಳು ತಡೆಯದಂತೆ ಆಗ್ರಹಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು  ತಾಲ್ಲೂಕು ಕಚೇರಿ ಮುಂದೆ ಧರಣಿ ನಡೆಸಿದರು.
5svp1ep
ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಜಿಲ್ಲಾಧ್ಯಕ್ಷ ವೀರಭದ್ರಸ್ವಾಮಿ ಧರಣಿ ನಿರತರನ್ನು ಉದ್ದೇಶಿಸಿ ಮಾತನಾಡಿ, ಸರ್ಕಾರ ತಾಲ್ಲೂಕಿಗೆ 18 ಸಾವಿರ ಮನೆಗಳನ್ನು ಮಂಜೂರು ಮಾಡಿದೆ. ಮನೆಗಳ ನಿರ್ಮಾಣ ವಿವಿಧ ಹಂತಗಳಲ್ಲಿ ನಡೆಯುತ್ತಿದೆ. ಮನೆಗಳ ನಿರ್ಮಾಣ ಕಾರ್ಯಕ್ಕೆ ಮರಳಿನ ಕೊರತೆ ಉಂಟಾಗಿದೆ ಎಂದು ಹೇಳಿದರು.ಪೊಲೀಸ್ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಮನೆ ನಿರ್ಮಾಣಕ್ಕೆ ಟ್ರ್ಯಾಕ್ಟರ್‌ನಲ್ಲಿ ತರುವ ಮರಗಳನ್ನು ವಶಪಡಿಸಿಕೊಳ್ಳುತ್ತಿದ್ದಾರೆ. ಇದರಿಂದ ಗೃಹ ನಿರ್ಮಾಣ ಕಾರ್ಯ ನೆನೆಗುದಿಗೆ ಬಿದ್ದಿದೆ. ಆದ್ದರಿಂದ ಸರ್ಕಾರ ಬಡವರ ಮನೆ ನಿರ್ಮಾಣಕ್ಕೆ ಬಳಸುವ ಮರಳಿಗೆ ರಿಯಾಯಿತಿ ನೀಡಬೇಕು. ಯಾವುದೇ ಅಡೆ ತಡೆ ಇಲ್ಲದೆ ಮರಳನ್ನು ತರಲು ಅವಕಾಶ ಮಾಡಿಕೊಡಬೇಕು ಎಂದು ಒತ್ತಾಯಿಸಿದರು.
  ಯಾವುದೇ ಕಾನೂನು ಬಡವರಿಗೆ ತೊಂದರೆ ಉಂಟುಮಾಡಬಾರದು. ಮಾನವೀಯ ದೃಷ್ಟಿಯಿಂದ ವಸತಿ ರಹಿತ ಫಲಾನುಭವಿಗಳು ಮನೆ ನಿರ್ಮಿಸಿಕೊಳ್ಳಲು ಅಗತ್ಯವಾದ ಆರ್ಥಿಕ ನೆರವು ನೀಡಿದರೆ ಸಾಲದು. ನಿರ್ಮಾಣಕ್ಕೆ ಪೂರಕವಾದ ಎಲ್ಲ ಸೌಲಭ್ಯಗಳೂ ಸಿಗುವಂತೆ ನೋಡಿಕೊಳ್ಳಬೇಕು. ಇಲ್ಲವಾದರೆ ಉದ್ದೇಶಿತ ಯೋಜನೆ ಫಲಕಾರಿಯಾಗುವುದಿಲ್ಲ ಎಂದು ಎಂದು ಹೇಳಿದರು.
ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಎನ್‌.ಜಿ.ಶ್ರೀರಾಮರೆಡ್ಡಿ, ಮುಖಂಡರಾದ ನಂಜುಂಡಪ್ಪ, ಕೃಷ್ಣಪ್ಪ, ಶ್ರೀನಿವಾಸರೆಡ್ಡಿ, ವೆಂಕಟರಾಮರೆಡ್ಡಿ, ವೈ.ಎಂ.ಮಂಜುನಾಥ್‌, ಸಿ.ವಿ.ವೆಂಕಟೇಶರೆಡ್ಡಿ, ವಿ.ಕೃಷ್ಣಪ್ಪ ಇದ್ದರು.
ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ

By suddi9

Leave a Reply

Your email address will not be published. Required fields are marked *