ಬಂಟ್ವಾಳ, : ಬಕ್ರೀದ್ ಹಬ್ಬದ ಆಚರಣೆಯ ಹಿನ್ನೆಲೆಯಲ್ಲಿ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಠಾಣಾಧಿಕಾರಿ ಪ್ರಸನ್ನ ಎಂ.ಎಸ್. ಅವರ ಅಧ್ಯಕ್ಷತೆಯಲ್ಲಿ ಶಾಂತಿಸಭೆ ನಡೆಯಿತು. ಈ ಸಂದರ್ಭದಲ್ಲಿ ಠಾಣಾಧಿಕಾರಿ ಪ್ರಸನ್ನ ಅವರು ಕಾನೂನು ಸುವ್ಯವಸ್ಥೆಯ ಬಗ್ಗೆ ಮುಂಜಾಗ್ರತಾ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು.
ತಾಲೂಕಿನ ಜನಪ್ರತಿನಿಧಿಗಳು, ಗ್ರಾಪಂ ಅಧ್ಯಕ್ಷರು, ಸದಸ್ಯರು, ರಾಜಕೀಯ ಪಕ್ಷಗಳ ಮುಖಂಡರು, ಸ್ಥಳೀಯ ಪ್ರಮುಖರು ಸಭೆಯಲ್ಲಿ ಭಾಗವಹಿಸಿ, ಸಲಹೆ ಸೂಚನೆಗಳನ್ನು ನೀಡಿದರು.
