ಕೋಲಾರ: ಜನಶಕ್ತಿ ರಂಗದ ತಾಲೂಕು ಅಧ್ಯಕ್ಷ ಎಂ.ಮುನಿಯಪ್ಪ ರವರ ಅಧ್ಯಕ್ಷತೆಯಲ್ಲಿ ರಾಜ್ಯಾಧ್ಯಕ್ಷ ಸಿ.ರಾಮಕೃಷ್ಣಯ್ಯ ರವರ ನೇತೃತ್ವದಲ್ಲಿ ಸಭೆ ನಡೆಸಿ ಸಮಿತಿಯ ತಾಲೂಕು ಪ್ರಧಾನ ಕಾರ್ಯದರ್ಶಿಯನ್ನಾಗಿ ಎಂ.ಹನುಮಾನ್ ರವರನ್ನು ಆಯ್ಕೆ ಮಾಡಲಾಯಿತು.
ಈ ಸಂದರ್ಭದಲ್ಲಿ ರಾಜ್ಯಾಧ್ಯಕ್ಷ ಸಿ.ರಾಮಕೃಷ್ಣಯ್ಯ ಮಾತನಾಡಿ ಜಿಲ್ಲೆಯಲ್ಲಿನ ಕೆಲವು ಕೆರೆಗಳಿಗೆ ಕೆ.ಸಿ ವ್ಯಾಲಿ ನೀರು ಹರಿದು ತುಂಬಿದ್ದು, ಮುಂದಿನ ದಿನಗಳಲ್ಲಿ ಎಲ್ಲಾ ಕೆರೆಗಳು ತುಂಬಲಿವೆ. ಈ ಸಂದರ್ಭದಲ್ಲಿ ಕೆರೆಗಳಲ್ಲಿ ಎತ್ತೇಚ್ಛವಾಗಿ ಬೆಳೆದಿರುವ ಜಾಲಿ ಮರಗಳನ್ನು ತೆಗೆಯಲು ಸರ್ಕಾರ ಮತ್ತು ಅಧಿಕಾರಿಗಳು ಮುಂದಾಗಬೇಕು. ಇಲ್ಲವಾದಲ್ಲಿ ಕೆರೆಗಳಲ್ಲಿನ ನೀರು ಪ್ರಾಣಿ ಪಕ್ಷಿಗಳಿಗೆ ಪ್ರಯೋಜನವಾಗುವುದಿಲ್ಲವೆಂದು ತಿಳಿಸಿದ ಅವರು ಈಗಾಗಲೇ ಈ ವಿಚಾರವಾಗಿ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿರುವುದಾಗಿಯೂ ತಿಳಿಸಿದರು.
ಸಭೆಯಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ಅಶೋಕ ಚಕ್ರವರ್ತಿ ಉಪಸ್ಥಿತರಿದ್ದರು.