ಬಂಟ್ವಾಳ : ಸ್ವಾತಂತ್ರ್ಯ ದಿನಾಚರಣೆಯಂದು ವಿದೇಶದಲ್ಲಿರುವ ಬಂಟ್ವಾಳ ತಾಲೂಕಿನ ಇರ್ವತ್ತೂರು ಗ್ರಾಮದ ಕಲಾಬಾಗಿಲ ನಿವಾಸಿಯೊಬ್ಬ ಪಾಕಿಸ್ಥಾನದ ಧ್ವಜದ ಚಿತ್ರವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟು ಸಮಾಜದಲ್ಲಿ  ಅಶಾಂತಿ ಸೃಷ್ಟಿಸಲು ಯತ್ನಿಸಿದ್ದಾನೆಂದು ಆರೋಪಿಸಿ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

IMG-20190816-WA0081ಕಲಾಬಾಗಿಲಿನ ಮಹಮ್ಮದ್ ನದೀಮ್ ಎಂಬಾತ  ಸದ್ಯ ವಿದೇಶದಲ್ಲಿದ್ದು,ಸ್ವಾತಂತ್ರ್ಯ ದಿನಾಚರಣೆಯಂದು  ಪಾಕಿಸ್ತಾನ ಧ್ವಜದ ಚಿತ್ರ ಹಾಕಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದಾನೆ.ಆತನ ವಿರುದ್ದ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಒತ್ತಾಯಿಸಲಾಗಿದೆ.ಇರ್ವತ್ತೂರಿನ ದೇವಿಪ್ರಸಾದ್ ಶೆಟ್ಟಿ ಅವರು ಈ ದೂರು ಸಲ್ಲಿಸಿದ್ದು,ಈ ಸಂದರ್ಭ ದಿನೇಶ್ ಶೆಟ್ಟಿ ಮೊದಲಾದವರಿದ್ದರು.ಈ ಪ್ರಕರಣವನ್ನು  ಗಂಭೀರವಾಗಿ ಪರಿಗಣಿಸಿ ಸೂಕ್ತ ಕ್ರಮಕ್ಕೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಹಿರಿಯ  ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

 

By suddi9

Leave a Reply

Your email address will not be published. Required fields are marked *