ಬಂಟ್ವಾಳ:ಶಿಸ್ತುಬದ್ಧ ಕ್ರೀಡೆಯಿಂದ ಆರೋಗ್ಯ ವೃದ್ಧಿ ಜೊತೆಗೆ ಸಮೃದ್ಧ ಸಮಾಜ ನಿರ್ಮಾಣವಾಗುತ್ತದೆ ಎಂದು ನೈನಾಡು ಚರ್ಚ್ನ ಧರ್ಮಗುರು ಸಂತೋಷ್ ಮಿನೇಜಸ್ ಹೇಳಿದ್ದಾರೆ.ಇಲ್ಲಿನ ನೈನಾಡು ಸರ್ಕಾರಿ ಪೌಢಶಾಲೆಯಲ್ಲಿ ಶುಕ್ರವಾರ ಏರ್ಪಡಿಸಿದ್ದ ತಾಲ್ಲೂಕು ಮಟ್ಟದ ಕೊಕ್ಕೊ ಪಂದ್ಯಾಟ ಉದ್ಘಾಟಿಸಿ ಅವರು ಮಾತನಾಡಿದರು.

ಪಿಲಾತಬೆಟ್ಟು ಗ್ರಾಮ ಪಂಚಾಯಿತಿ ಅಧ್ಯಕ್ಷ ಚಂದ್ರಶೇಖರ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸದಸ್ಯೆ ಸರೋಜ ಶೆಟ್ಟಿ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಹರೀಶ ಪೂಜಾರಿ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಉಮಾನಾಥ ರೈ, ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಚಿನ್ನಪ್ಪ, ಉದ್ಯಮಿ ಹರೀಂದ್ರ ಟಿ.ಪೈ, ದೈಹಿಕ ಶಿಕ್ಷಣ ಪರಿವೀಕ್ಷಕಿ ರತ್ನಾವತಿ, ನಯನ ಚಾರಿಟೇಬಲ್ ಟ್ರಸ್ಟಿನ ನಿರ್ದೇಶಕ ಸೈಮನ್ ಮೊರಾಸ್, ಪ್ರಮುಖರಾದ ಪುಷ್ಪರಾಜ ಶೆಟ್ಟಿ, ಗೋಪಾಲ ಪೂಜಾರಿ, ಉಮೇಶ ಆಚಾರ್ಯ, ನಾರಾಯಣ ಮತ್ತಿತರರು ಇದ್ದರು.ಮುಖ್ಯಶಿಕ್ಷಕ ಅಶೋಕ್ ಕುಮಾರ್ ಸ್ವಾಗತಿಸಿ , ಪ್ರಾಸ್ತಾವಿಕ ಮಾತನಾಡಿದರು. ಶಿಕ್ಷಕ ಹೇಮಣ್ಣ ನಿಂಬಣ್ಣನವರ್ ವಂದಿಸಿ, ಕಾರ್ಯಕ್ರಮ ನಿರೂಪಿಸಿದರು.
ವಿಜೇತ ತಂಡಗಳು:

ಬಾಲಕರ ವಿಭಾಗದಲ್ಲಿ ನೈನಾಡು ಸರ್ಕಾರಿ ಪ್ರೌಢಶಾಲೆ ಪ್ರಥಮ, ಬೋಳಂತಿಮೊಗರು ಸರ್ಕಾರಿ ಪ್ರೌಢಶಾಲೆ ದ್ವಿತೀಯ ಸ್ಥಾನ ಗೆದ್ದುಕೊಂಡಿತು. ಬಾಲಕಿಯರ ವಿಭಾಗದಲ್ಲಿ ಬೋಳಂತಿಮೊಗರು ಸರ್ಕಾರಿ ಪ್ರೌಢಶಾಲೆ ಪ್ರಥಮ ಮತ್ತು ನೈನಾಡು ಸರ್ಕಾರಿ ಪ್ರೌಢಶಾಲೆ ದ್ವಿತೀಯ ಸ್ಥಾನ ಗೆದ್ದುಕೊಂಡಿದೆ.ಇದೇ ವೇಳೆ ಶಾಸಕ ಉಳಿಪಾಡಿಗುತ್ತು ರಾಜೇಶ ನಾಯ್ಕ್ ಭೇಟಿ ನೀಡಿ ಕ್ರೀಡಾಳುಗಳಿಗೆ ಅಭಿನಂದನೆ ಸಲ್ಲಿಸಿದರು.