ಬಂಟ್ವಾಳ ತಾಲ್ಲೂಕಿನ ಬಿ.ಸಿ.ರೋಡು ಭಾರತೀಯ ಜೀವ ವಿಮಾ ಶಾಖೆ ವತಿಯಿಂದ ಶನಿವಾರ ಸಮಾರೋಪಗೊಂಡ ‘ವಿಮಾ ಸಪ್ತಾಹ’ ಕಾರ್ಯಕ್ರಮದಲ್ಲಿ ರಾಜ್ಯಪ್ರಶಸ್ತಿ ಪುರಸ್ಕೃತ ಕೆ.ಕೃಷ್ಣ ಕುಮಾರ್ ಪೂಂಜ ಮತ್ತು ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ನಿವೃತ್ತ ಮುಖ್ಯಶಿಕ್ಷಕ ಬಿ.ರಾಮಚಂದ್ರ ರಾವ್ ಇವರನ್ನು ಸನ್ಮಾನಿಸಲಾಯಿತು. ಹಿರಿಯ ಅಧಿಕಾರಿ ಪಿ.ಸಿ.ನಾಯಕ್, ಹಿರಿಯ ಶಾಖಾಧಿಕಾರಿ ಪ್ರೇಮನಾಥ ರಾವ್ ಮತ್ತಿತರರು ಇದ್ದರು.