ಬಂಟ್ವಾಳ: ಕಳೆದ ವರ್ಷ ಮಳೆಗಾಲದ ಸಂದರ್ಭ ಕುಸಿದು ಬಿದ್ದಿರುವ  ಮೂಲರಪಟ್ಣ ಸೇತುವೆಯ ಕಾಮಗಾರಿಯನ್ನು ತಕ್ಷಣ ಆರಂಭಿಸುವಂತೆ  ಉಪಮುಖ್ಯಮಂತ್ರಿ ಹಾಗೂ ಲೋಕೋಪಯೋಗಿ ಸಚಿವ  ಗೋವಿಂದ ಕಾರಜೋಳ ಅವರು ಅಧಿಕಾರಿಗಳಿಗೆ ಆದೇಶ ನೀಡಿದರು. ಬಂಟ್ವಾಳ ಶಾಸಕ ಯು.ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ಗುರುವಾರ ಖುದ್ದು ಉಪಮುಖ್ಯಮಂತ್ರಿಯವರನ್ನು ಭೇಟಿಯಾಗಿ ಸೇತುವೆ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ ಸಲ್ಲಿಸಿದ್ದರು.IMG-20190919-WA0057

ಇದಕ್ಕೆ ಸ್ಪಂದಿಸಿದ ಉಪಮುಖ್ಯಮಂತ್ರಿಯವರಾದ ಗೋವಿಂದ ಕಾರಜೋಳರವರು ಸೇತುವೆ ನಿರ್ಮಾಣಕ್ಕೆ ಬೇಕಾದ ರೂ.14.35 ಕೋಟಿ ಅನುದಾನವನ್ನು  ಬಿಡುಗಡೆಗೊಳಿಸಿ ಶೀಘ್ರವಾಗಿ ಕಾಮಗಾರಿ ಆರಂಭಿಸುವಂತೆ ಅಧಿಕಾರಿಗಳಿಗೆ ನಿರ್ದೇಶಿಸಿದರು.      ಸಂದರ್ಭದಲ್ಲಿ ಬಂಟ್ವಾಳ. ಕ್ಷೇತ್ರ ಬಿಜೆಪಿ ಸಮಿತಿ ಅಧ್ಯಕ್ಷ ದೇವದಾಸ ಶೆಟ್ಟಿ, ಪುರಸಭಾ   ಸದಸ್ಯ ಗೋವಿಂದ ಪ್ರಭು,ಬಿಜೆಪಿ   ಮುಖಂಡ ಉದಯಕುಮಾರ್ ರಾವ್  ಮೊದಲಾದವರಿದ್ದರು.   ಕಳೆದ ವರ್ಷ ಜೂನ್  25 ರಂದು  ಮೂಲರಪಟ್ನ ಸೇತುವೆಯು ಕುಸಿದು ಬಿದ್ದಿತ್ತು ಪರಿಣಾಮ ಬಂಟ್ವಾಳ ಮತ್ತು ಮಂಗಳೂರು ಉತ್ತರ ವಿಧಾನಸಭಾ ವ್ಯಾಪ್ತಿಯ  ಗಂಜಿಮಠದ ಸಂಪರ್ಕ ಕಡಿದು ಹೋಗಿತ್ತು. ಬಂಟ್ವಾಳ ಶಾಸಕರು ವಿಶೇಷ ಮುತುವರ್ಜಿ ವಹಿಸಿ ಸೇತುವೆ ನಿರ್ಮಾಣಕ್ಕಾಗಿ ಪಣತೊಟ್ಟಿದ್ದಾರೆ.

By suddi9

Leave a Reply

Your email address will not be published. Required fields are marked *