ಅರಳ:ಬಂಟ್ವಾಳ ತಾಲೂಕಿನ ಗುಡ್ಡೆಯಂಗಡಿ ಹಾಲುಉತ್ಪಾದಕರ ಸಹಕಾರಿ ಸಂಘ ನಿಯಮಿತ ಅರಳ ಇದರ 2018-19 ನೇ ಸಾಲಿನ ವಾರ್ಷಿಕ ಮಹಾಸಭೆಯು ಶನಿವಾರ ಗುಡ್ಡೆಯಂಗಡಿ ಹಾಲು ಉತ್ಪಾದಕರ ಸಹಕಾರಿ ಸಂಘದ ವಠಾರದಲ್ಲಿ ನಡೆಯಿತು.
ಗುಡ್ಡೆಯಂಗಡಿ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ನಂದರಾಮ ರೈ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ವಿಸ್ತರಣಾಧಿಕಾರಿ ಜಗದೀಶ್ ಉಪಸ್ಥಿತರಿದ್ದರು. ವಾರ್ಷಿಕ ವರದಿಯನ್ನು ಕಾರ್ಯದರ್ಶಿ ದೇವಪ್ಪ ಪೂಜಾರಿ ಬಾಲಿಕೆ ಮಂಡಿಸಿದರು. ಉಪಾದ್ಯಕ್ಷ ವಸಂತ ದೇವಾಡಿಗ ಹಾಗೂ ಆಡಳಿತ ಮಂಡಳಿ ಸದಸ್ಯರು ಉಪಸ್ಥಿತರಿದ್ದರು.
