ಬಂಟ್ವಾಳ : ಸರಕಾರಿ ಕಚೇರಿಗಳಲ್ಲಿ ದುಡಿಯುತಿರುವ ನಾವು ಕನಕದಾಸರ ಸಾಹಿತ್ಯದಲ್ಲಿ ಇದ್ದಂತೆ ಜಾತಿ ತಾರತಮ್ಯ ಮಾಡದೆ ಸೇವೆಗಳನ್ನು ಕೊಡಬೇಕು ಎಂದು ಬಂಟ್ವಾಳ ತಹಶೀಲ್ದಾರ್ ರಶ್ಮಿ. ಎಸ್ ಆರ್ ಹೇಳಿದರು. ಬಿ ಸಿ ರೋಡಿನ ಮಿನಿ ವಿಧಾನ ಸೌಧದ ಸಭಾಂಗಣದಲ್ಲಿ ಇಂದು ಶುಕ್ರವಾರ ನಡೆದ ಭಕ್ತ ಕನಕದಾಸರ ಜಯಂತಿ ಆಚರಣೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಜಾತಿ ಪದ್ದತಿಯ ತಾರತಮ್ಯಗಳನ್ನು ಅಲ್ಲಗೆಳೆದ ಕನಕದಾಸರು ಕನ್ನಡ ಸಾಹಿತ್ಯ ಕ್ಷೇತ್ರಕ್ಕು ಮಹತ್ವದ ಕೊಡುಗೆ ನೀಡಿದ್ದಾರೆ ಎಂದು ಹೇಳಿದರು.

ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದ ತಾಲೂಕು ಪಂಚಾಯತ್ ಉಪಾಧ್ಯಕ್ಷ ಅಬ್ಬಾಸ್ ಆಲಿ ಕನಕದಾಸರು ಸಮಾಜಿಕ ಮತ್ತು ಸಾಹಿತ್ಯ ಕ್ಷೇತ್ರಗಳಿಗೆ ನೀಡಿದ ಕೊಡುಗೆ ಅವಿಸ್ಮರಣೀಯ ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಮಾತನಾಡಿದ ಗ್ರಾಮ ಲೆಕ್ಕಾಧಿಕಾರಿ ಶಿವನಂದ ನಾಟೆಕಾರ್ ಕನಕನ ಕಿಂಡಿಯು ಕನಕದಾಸರ ವ್ಯಕ್ತಿತ್ವದ ಪ್ರತಿಬಿಂಬವಾಗಿ ನಿಂತಿದೆ. ಜಾತಿ ಮತಗಳ ಕಟ್ಟು ಪಾಡಿಲ್ಲದ ಕನಕದಾಸರ ಕೀರ್ತಿ ಅಜಾರಮಾರವಾಗಿಸಿದೆ. ಎಂದು ಈ ಸಂದರ್ಭದಲ್ಲಿ ಹೇಳಿದರು.
ಈ ಸಂದರ್ಭದಲ್ಲಿ ಕೇಂದ್ರ ಸ್ಥಾನಿಯ ಶಿರಸ್ತೇದಾರ್ ರಾಧಾಕೃಷ್ಣ. ಪಾಣೆಮಂಗಳೂರು ನಾಡಕಚೇರಿ ಉಪತಹಶೀಲ್ದಾರ್ ರೂಪೇಶ್ ಕುಮಾರ್. ಶಿರಸ್ತೇದಾರ್ ರಾಜೇಶ್ ನಾಯ್ಕ್. ಆಹಾರ ಶಿರಸ್ತೇದಾರ್ ಶ್ರೀನಿವಾಸ್.ಪ್ರಭಾರ ಉಪತಹಶೀಲ್ದಾರ್ ಸೀತಾರಾಮ ರಾಷ್ಟ್ರೀಯ ಹಬ್ಬಗಳ ಆಚರಣ ಸಮಿತಿಯ ವಿಷಯ ನಿರ್ವಾಹಕ ವಿಶು ಕುಮಾರ್. ಬಂಟ್ವಾಳ ಹೋಬಳಿ ಕಂದಾಯ ನಿರೀಕ್ಷಕ ನವೀನ್ ಬೆಂಜನ ಪದವು.ತಾಲೂಕು ಕಚೇರಿ ಸಿಬ್ಬಂದಿಗಳು.ಗ್ರಾಮ ಲೆಕ್ಕಾಧಿಕಾರಿಗಳು.ಗ್ರಾಮ ಕರಣಿಕರು ಸಾರ್ವಜನಿಕರು ಉಪಸ್ಥಿತರಿದ್ದರು. ವಿಟ್ಲ ಹೋಬಳಿ ಕಂದಾಯ ನಿರೀಕ್ಷಕ ದಿವಾಕರ ಮುಗುಳಿಯ ಸ್ವಾಗತಿಸಿದರು. ತಾಲೂಕು ಕಚೇರಿ ವಿಷಯ ನಿರ್ವಾಹಕ ಮಲ್ಲೇಶ್ ವಂದಿಸಿದರು. ಪಾಣೆಮಂಗಳೂರು ಕಂದಾಯ ನಿರೀಕ್ಷಕ ರಾಮ ಕಾಟಿ ಪಳ್ಳ ಕಾರ್ಯಕ್ರಮ ನಿರ್ವಹಿಸಿದರು
