ಬಂಟ್ವಾಳ: ಜೀವನದಲ್ಲಿ ಗೆಲುವು ಸಂತೋಷವನ್ನು ನೀಡಿದರೆ, ಸೋಲು ಧೈರ್ಯದಿಂದ ಮುನ್ನಡೆಯಲು ಹೇಳಿಕೊಡುತ್ತದೆ. ಇಂದಿನ ಯುವ ಸಮೂಹಕ್ಕೆ ಶಾರೀರಿಕ ದೃಢತೆ ಬೇಕಾಗಿದ್ದು, ಶಾರೀರಿಕ ಹಾಗೂ ಮಾನಸಿಕವಾಗಿ ಸದೃಢರಾಗಲು ಕ್ರೀಡಾ ಮನೋಭಾವವು ಅವಶ್ಯವಾಗಿದೆ ಎಂದು ಪಾಣೆಮಂಗಳೂರು ರೈತರ ಸೇವಾ ಸಹಕಾರಿ ಸಂಘದ ನಿರ್ದೇಶಕ ವೆಂಕಟೇಶ್ವರ ಭಟ್ ಮುಳ್ಳುಂಜ  ಹೇಳಿದರು.
IMG-20191115-WA0006
ಕಲ್ಲಡ್ಕ ಶ್ರೀರಾಮ ಪದವಿಪೂರ್ವ ವಿದ್ಯಾಲಯದ 2019-20ನೇ ಸಾಲಿನ ವಾರ್ಷಿಕ ಕ್ರೀಡಾಕೂಟವನ್ನು ಉದ್ಘಾಟಿಸಿ ಅವರು  ಮಾತನಾಡಿದರು.
ಶ್ರೀರಾಮ ವಿದ್ಯಾಕೇಂದ್ರದ ಸಂಚಾಲಕರಾದ ವಸಂತ ಮಾಧವ ಇವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.
IMG-20191115-WA0007ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ್ ಭಟ್ ಕಲ್ಲಡ್ಕ , ಶ್ರೀರಾಮ ವಿದ್ಯಾಕೇಂದ್ರದ ಕೋಶಾಧಿಕಾರಿ ಸತೀಶ್ ಭಟ್, ಶಿವಗಿರಿ, ಆಡಳಿತ ಮಂಡಳಿ ಸದಸ್ಯರಾದ ನಾಗೇಶ್, ವಿದ್ಯಾಭಾರತಿ ಕರ್ನಾಟಕ ಇದರ ಕಾರ್ಯದರ್ಶಿ ಲೋಕಯ್ಯ ಡಿ ಹಾಗೂ ಕಾಲೇಜಿನ ಪ್ರಾಂಶುಪಾಲರಾದ ವಸಂತ ಬಲ್ಲಾಳ್ ಉಪಸ್ಥಿತರಿದ್ದರು. ಕಾಲೇಜಿನ ಕ್ರೀಡಾಪಟುಗಳು ಕ್ರೀಡಾಜ್ಯೋತಿಯನ್ನು ಬೆಳಗಿಸಿದರು. ಕಾಲೇಜಿನ ಕ್ರೀಡಾ ಕಾರ್ಯದರ್ಶಿಯಾದ ಕೌಶಿಕ್ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು. ದೈಹಿಕ ಶಿಕ್ಷಣ ನಿರ್ದೇಶಕರಾದ ಕರುಣಾಕರ್ ಸ್ವಾಗತಿಸಿದರು. ದ್ವಿತೀಯ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಸಿಂಚನ ವಂದಿಸಿದರು. ಗಣಕಶಾಸ್ತ್ರ ಉಪನ್ಯಾಸಕಿ ಚೈತನ್ಯ ಕಾರ್ಯಕ್ರಮವನ್ನು ನಿರೂಪಿಸಿದರು.
IMG-20191115-WA0008

By suddi9

Leave a Reply

Your email address will not be published. Required fields are marked *