ಬಂಟ್ವಾಳ: ಬಿಲ್ಲವ ಕಣ್ಮನಿಗಳ ಅಭಿನಂದನಾ ಸಮಿತಿ, ತಾಲೂಕಿನ ಬಿಲ್ಲವ ಸಂಘಟನೆಗಳು, ಯುವವಾಹಿನಿ ಬಂಟ್ವಾಳ ಮತ್ತು ಮಾಣಿ ಘಟಕಗಳ ಸಹಭಾಗಿತ್ವದಲ್ಲಿ ದಶಂಬರ್.8 ರಂದು ಬಿ.ಸಿ.ರೋಡಿನ ಸ್ಪರ್ಶಾ ಕಲಾಮಂದಿರದಲ್ಲಿ ನಡೆಯುವ ನಮ ಬಿರುವೆರ್ ಐಕ್ಯತಾ ಸಮಾವೇಶ ನಡೆಯಲಿದೆ ಎಂದು ಸಮಿತಿಯ ಅಧ್ಯಕ್ಷ ಯಶವಂತ ಪೂಜಾರಿ ದೇರಾಜೆಗುತ್ತು ಹೇಳಿದ್ದಾರೆ. ಗುರುವಾರ ಸಂಜೆ ಮೆಲ್ಕಾರ್ ನಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಸಮಾವೇಶಕ್ಕೆ ಭರದ ಸಿದ್ಧತೆ ನಡೆಯುತ್ತಿದೆ. ಸಮುದಾಯದ ಇತಿಹಾಸದಲ್ಲೇ ಅಪೂರ್ವ ಸಮಾರಂಭ ಇದಾಗಿದ್ದು ಹತ್ತರಿಂದ ಹದಿನೈದು ಸಾವಿರ ಜನರು ಪಾಲ್ಗೊಳ್ಳುವ ನಿರೀಕ್ಷೆ ಇದೆ ಎಂದು ಹೇಳಿದರು.
ಈಗಾಗಲೇ ಸಮಿತಿಯ ಪ್ರಮುಖರನ್ನೊಳಗೊಂಡ ನಾಲ್ಕೈದು ತಂಡಗಳು ತಾಲೂಕಿನಾದ್ಯಾಂತ ಇರುವ ಬಿಲ್ಲವ ಸಂಘಟನೆಗಳು, ಬಿಲ್ಲವ ಪ್ರಮುಖರನ್ನು ಭೇಟಿ ಮಾಡಿ ಸಮಾಲೋಚನಾ ಸಭೆ ನಡೆಸಿದ್ದು ತಾಲೂಕಿನ ಪ್ರತೀ ಗ್ರಾಮಗಳಿಂದ ವ್ಯಾಪಕ ಬೆಂಬಲ ವ್ಯಕ್ತವಾಗಿದೆ ಎಂದು ಹೇಳಿದರು.
ಪ್ರಸ್ತುತ ನಾನಾ ಕಾರಣಗಳಿಂದಾಗಿ ಅಲ್ಲಲ್ಲಿ ವಿಭಜನೆಗೊಂಡಿರುವ ಬಿಲ್ಲವರು ಒಂದೇ ವೇದಿಕೆಯಡಿ ಸಂಪನ್ನಗೊಂಡು ಬಿಲ್ಲವ ಸಮಾಜದ ಗತವೈಭವ ಮತ್ತೊಮ್ಮೆ ಜಗತ್ತಿಗೆ ಸಾರಲು ಈ ಐಕ್ಯತಾ ಸಮಾವೇಶ ಮುನ್ನುಡಿಯಾಗಲಿದೆ ಎಂದು ಸಮಿತಿಯ ಗೌರವಾಧ್ಯಕ್ಷ ಎ.ರುಕ್ಮಯ ಪೂಜಾರಿ ತಿಳಿಸಿದರು. ರಾಜಕೀಯ ರಹಿತವಾಗಿ ನಡೆಯುವ ಈ ಸಮಾವೇಶದಲ್ಲಿ ರಾಪ್ಟ್ರೀಯ ಬಿಲ್ಲವ ಮಹಾಮಂಡಲದ ಗೌರವಾಧ್ಯಕ್ಷ ಜಯ ಸಿ.ಸುವರ್ಣ,ಅಧ್ಯಕ್ಷ ಡಾ.ರಾಜಶೇಖರ ಕೋಟ್ಯಾನ್ ಹಾಗೂ ದ.ಕ.ಜಿಲ್ಲಾ ಉಸ್ತುವಾರಿ ಸಚಿವರಾದ ಕೋಟಾ ಶ್ರೀನಿವಾಸ ಪೂಜಾರಿ ಅವರನ್ನು ಅಭಿನಂದನೆ ಸಲ್ಲಿಸಲಾಗುವುದು ಹಾಗೆಯೇ 2018-19 ನೇ ಸಾಲಿನಲ್ಲಿ ತಾಲೂಕಿನ ಪಿಯುಸಿ,ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 90 ಕ್ಕಿಂತ ಹೆಚ್ಚು ಅಂಕಗಳುಸಿದ ಸಮುದಾಯದ ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಗುವುದು ಎಂದರು.
ಸಮಾವೇಶದಂದು ಬೆಳಿಗ್ಗೆ 8.30ಕ್ಕೆ ಬಿ.ಸಿ.ರೋಡಿನ ಬ್ರಹ್ಮಶ್ರೀ ನಾರಾಯಣ ಗುರು ಮಂದಿರದಲ್ಲಿ ಗುರುಪೂಜೆಯಾಗಿ ಅಲ್ಲಿಂದ ಸ್ವಾಮೀಜಿ ಸಹಿತ ಗಣ್ಯರನ್ನು ಪೂರ್ಣಕುಂಭ ಸ್ವಾಗತದೊಂದಿಗೆ ಸ್ಪರ್ಶಾ ಕಲಾಮಂದಿರಕ್ಕೆ ಕರೆತರಲಾಗುವುದು.
ಶ್ರೀ ಕ್ಷೇತ್ರ ಕನ್ಯಾಡಿಯ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ, ಬಲ್ಯೊಟ್ಟು ಕ್ಷೇತ್ರದ ಶ್ರೀ ವಿಖ್ಯಾತನಂದ ಸ್ವಾಮೀಜಿ, ಕಾಣಿಯೂರು ಕ್ಷೇತ್ರದ ಶ್ರೀ ಮಹಾಬಲ ಸ್ವಾಮೀಜಿ, ಕುಕ್ಕಾಜೆ ಕ್ಷೇತ್ರದ ಶ್ರೀ ಕೃಷ್ಣ ಗುರೂಜಿ ಆರ್ಶೀವಚನ ನೀಡುವರು.
ಬಂಟ್ವಾಳ ತಾಲೂಕು ಬಿಲ್ಲವ ಸಂಘದ ಅಧ್ಯಕ್ಷ ಕೆ.ಸೇಸಪ್ಪ ಕೋಟ್ಯಾನ್ ಅಧ್ಯಕ್ಷತೆ ವಹಿಸುವರು.
ಶಾಸಕರಾದ ಉಮಾನಾಥ ಕೋಟ್ಯಾನ್, ಹರೀಶ್ ಕುಮಾರ್, ನಿವೃತ್ತ ಡಿವೈಎಸ್ ಪಿ. ಬಿ.ಕೆ.ಶಿವರಾಮ್, ಆಕಾಶವಾಣಿ ಕಾರ್ಯನಿರ್ವಹಣಾಧಿಕಾರಿ ಡಾ.ಸದಾನಂದ ಪೆರ್ಲ, ಉಡುಪಿ ಎಎಸ್ಪಿ ಕುಮಾರಚಂದ್ರ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಆಯುಕ್ತ ಡಾ.ವಿಜಯ ಪ್ರಕಾಶ್, ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಇಲಾಖೆಯ ಆಪ್ತ ಸಹಾಯಕ ಜಗನ್ನಾಥ ಬಂಗೇರ, ಕುದ್ರೋಳಿ ಕ್ಷೇತ್ರದ ಅಧ್ಯಕ್ಷ ಎಚ್.ಎಸ್.ಸಾಯಿರಾಂ, ಎಸ್ ಎನ್ ಡಿ ಪಿ ಮಹಿಳಾ ಸಮಿತಿ ರಾಜ್ಯಾಧ್ಯಕ್ಷೆ ಗೀತಾಂಜಲಿ ಸುವರ್ಣ, ಯುವವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷ ನರೇಶ್ ಕುಮಾರ್ ಸಸಿಹಿತ್ಲು, ಉದ್ಯಮಿ ಜಯದೀಪ್ ಡಿ.ಸುವರ್ಣ, ಪುತ್ತೂರು ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘದ ಅಧ್ಯಕ್ಷ ಜಯಂತ ನಡುಬೈಲು, ಯುವವಾಹಿನಿ ಬಂಟ್ವಾಳ ಘಟಕ ಅಧ್ಯಕ್ಷ ಬಿ.ಇಂದಿರೇಶ್, ಮಾಣಿ ಘಟಕದ ಅಧ್ಯಕ್ಷ ರಮೇಶ್ ಮುಜಲ ಅತಿಥಿಗಳಾಗಿ ಭಾಗವಹಿಸುವರು ಎಂದು ಸಮಿತಿಯ ಪ್ರ.ಕಾರ್ಯದರ್ಶಿ ಜಗದೀಶ್ ಕೊಯಿಲ ತಿಳಿಸಿದರು.
ಸಮಿತಿ ಗೌರವಾಧ್ಯಕ್ಷರಾದ ಕೆ.ಸಂಜೀವ ಪೂಜಾರಿ ಬೊಳ್ಳಾಯಿ, ಕೆ.ಮಾಯಿಲಪ್ಪ ಸಾಲ್ಯಾನ್ , ಪ್ರೇಮನಾಥ್ ಕೆ.,ಪದಾಧಿಕಾರಿಗಳಾದ ಜಯರಾಮ ಪೂಜಾರಿ,ಆನಂದ ಸಾಲಿಯಾನ್,ಪುರುಷ ಎನ್.ಸಾಲ್ಯಾನ್,ಜಯಂತಿ ಪೂಜಾರಿ,ಸುಂದರ ಪೂಜಾರಿ ಬೋಳಂಗಡಿ,ಮೋನಪ್ಪ ದೇವಸ್ಯ,ಶೈಲಜಾ ರಾಜೇಶ್,ಗೋಪಾಲ ಅಂಚನ್,ಸುರೇಶ್ ಪಂಜಿಕಲ್ಲು,ಭವಾನಿ ಕೆ.ಮೊದಲಾದವರು ಸುದ್ದಿಗೋಷ್ಠಿಯಲ್ಲಿದ್ದರು.
