ಬಂಟ್ವಾಳ ; ಇತ್ತೀಚೆಗೆ ನಿಧನರಾದ ಬಿಜೆಪಿ ಹಿರಿಯ ಮುಖಂಡ,ಸಹಕಾರಿ ಧುರೀಣ ದಿವಂಗತ ಜಿ.ಆನಂದರವರ ಮನೆಗೆ ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲುರವರು ಶನಿವಾರ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದರು. ಈ ಸಂದರ್ಭದಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು,
ಮಂಗಳೂರು ಕ್ಷೇತ್ರ ಬಿಜೆಪಿ ಸಮಿತಿ ಅಧ್ಯಕ್ಷ ಸಂತೋಷ್ ಕುಮಾರ್ ಬೋಳಿಯಾರ್,ಜಿಲ್ಲಾ ವಕ್ತಾರ ಹರಿಕೃಷ್ಣ ಬಂಟ್ವಾಳ,ರಾಜ್ಯ ಸಹವಕ್ತಾರೆ ಸುಲೋಚನಾ ಜಿ.ಕೆ.ಭಟ್, ಬಂಟ್ವಾಳ ಕ್ಷೇತ್ರ ಸಮಿತಿ ಅಧ್ಯಕ್ಷ ದೇವದಾಸ ಶೆಟ್ಟಿ ಮತ್ತು ಜಿಲ್ಲಾ,ಕ್ಷೇತ್ರ ಬಿಜೆಪಿ ಪ್ರಮುಖರು ಉಪಸ್ಥಿತರಿದ್ದರು.