ಬಂಟ್ವಾಳ:  ಮಂಗಳೂರು ನಗರಕ್ಕೆ ನೀರು ಪೂರೈಸಲು ಜಿಲ್ಲೆಯ  ಜೀವನದಿ ನೇತ್ರಾವತಿಗೆ ತುಂಬೆಯಲ್ಲಿ ನೂತನ ಡ್ಯಾಂನಲ್ಲಿ  ಈ ಬಾರಿ ಏಳು ಮೀಟರ್ ನೀರು ನಿಲ್ಲಿಸುವ ನಿಟ್ಟಿನಲ್ಲಿ ಮುಳುಗಡೆ ಪ್ರದೇಶದ ನಿಖರ ವರದಿಯನ್ನು ತಕ್ಷಣ ಸಲ್ಲಿಸುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಪೊನ್ನುರಾಜ್ ಸೂಚಿಸಿದ್ದಾರೆ.  ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆಸಿದ   ಅಧಿಕಾರಿಗಳ ಸಭೆಯಲ್ಲಿ ಅವರು ಈ ಆದೇಶವನ್ನು ಸಂಬಂಧಿಸಿದ ಅಧಿಕಾರಿಗಳಿಗೆ ನೀಡಿದ್ದಾರೆ.
2016ರಲ್ಲಿ ಆಗಿನ ಜಿಲ್ಲಾಧಿಕಾರಿ ಇಬ್ರಾಹಿಂ ಮುಳುಗಡೆ ಪ್ರದೇಶಕ್ಕೆ ಭೇಟಿ ನೀಡಿ ಸಂತ್ರಸ್ತ ರೈತರ ಅಧಿಕಾರಿಗಳ ಜನಪ್ರತಿನಿಧಿಗಳ ಸಭೆ ನಡೆಸಿ ವರತೆ ಪ್ರದೇಶ ಸೇರಿಸಿ 7 ಪ್ಲಸ್ ಒಂದು 8 ಮೀಟರ್ ಗೆ ರೈತರ ಸಮಕ್ಷಮ ಸರ್ವೆ ನಡೆಸಿ ವರದಿ ನೀಡುವಂತೆ ಆದೇಶಿಸಿದ ಪ್ರಕಾರ 80 ಲಕ್ಷ ರೂಪಾಯಿ ವೆಚ್ಚದಲ್ಲಿ ಜಂಟಿ ಸರ್ವೆ ಕಾರ್ಯ ನಡೆದಿರುತ್ತದೆ.  ಇದೇ  ಪೊನ್ನುರಾಜ್ ಅವರು ಜಿಲ್ಲಾಧಿಕಾರಿಯಾಗಿದ್ದಾಗ ಬಂಟ್ವಾಳ  ತಾಲೂಕು ಪಂಚಾಯಿತ್ ಸಭಾಂಗಣದಲ್ಲಿ ರೈತರು, ಜನಪ್ರತಿನಿಧಿಗಳು, ಅಧಿಕಾರಿಗಳ ಸಭೆ ನಡೆಸಿ  ಯಾವುದೇ ರೈತರಿಗೆ ಅನ್ಯಾಯವಾಗದಂತೆ ನೀರು ಸಂಗ್ರಹಿಸಲಾಗುವುದು ಎಂದು ಭರವಸೆ ನೀಡಿದ್ದರು.
IMG_20191218_132824
ಆದರೆ ಇಂದಿಗೂ ಎಲ್ಲ ರೈತರಿಗೆ ಮುಳುಗಡೆ ಜಮೀನಿಗೆ ಸಂಬಂಧಿಸಿ ನ್ಯಾಯೋಚಿತ  ಪರಿಹಾರ ಸಿಕ್ಕಿರುವುದಿಲ್ಲ  ಹಾಗೆಯೇ  ತುಂಬೆ ಡ್ಯಾಂ ಸಂತ್ರಸ್ತ ರೈತರ ಜ್ವಲಂತ ಸಮಸ್ಯೆಯನ್ನು ಪರಿಹರಿಸುವ ಬಗ್ಗೆ ಅಧಿಕಾರಿಗಳ ರೈತರ ಜನಪ್ರತಿನಿಧಿಗಳ ಜಂಟಿ ಸಭೆಯನ್ನು ನಡೆಸುವಂತೆ ಸಜಿಪಮುನ್ನೂರು ಗ್ರಾಮ ಸಭೆಯಲ್ಲಿ ನಿರ್ಣಯಿಸಲಾಗಿದೆ ಅದು ಈ ತನಕ ಜಾರಿ ಆಗಿರುವುದಿಲ್ಲ ಎಂದು  ತುಂಬೆ ವೆಂಟೆಡ್ ಡ್ಯಾಂ ಸಂತ್ರಸ್ತ ಹೋರಾಟ ಸಮಿತಿ ಅಧ್ಯಕ್ಷ ಎಂ. ಸುಬ್ರಮಣ್ಯ ಭಟ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೆಲ  ದಿನಗಳ ಹಿಂದೆ  ಜಿಲ್ಲಾಧಿಕಾರಿಗಳು, ಜಿಲ್ಲಾ ಉಸ್ತುವಾರಿ ಸಚಿವರ  ಹಾಗೂ ಬಂಟ್ವಾಳ ಶಾಸಕರನ್ನು ಭೇಟಿ ಮಾಡಿದ ಹೋರಾಟ ಸಮಿತಿಯ ಪದಾಧಿಕಾರಿಗಳಿಗೆ ದಶಂಬರ 10 ತಾರೀಖಿನ ಒಳಗಡೆ ಜಂಟಿ ಸಭೆಯನ್ನು ನಡೆಸುವುದಾಗಿ ಖಚಿತ ಭರವಸೆ ನೀಡಲಾಗಿತ್ತು. ಆದರೆ ಆದು ಈಡೇರಿಲ್ಲ.  ರೈತರ   ದೀರ್ಘಕಾಲೀನ ಈ ಸಮಸ್ಯೆ ಪರಿಹರಿಸಲು ಕೂಡಲೇ ಕ್ರಮಕೈಗೊಳ್ಳುವಂತೆ ಬಂಟ್ವಾಳ ತಾಲೂಕು ರೈತ ಸಂಘ ಹಸಿರು ಸೇನೆ ಅಧ್ಯಕ್ಷ, ತುಂಬೆ ವೆಂಟೆಡ್ ಡ್ಯಾಂ ಸಂತ್ರಸ್ತ ಹೋರಾಟ ಸಮಿತಿ ಅಧ್ಯಕ್ಷ ಎಂ ಸುಬ್ರಮಣ್ಯ ಭಟ್ ಒತ್ತಾಯಿಸಿದ್ದಾರೆ
Attachments area

 

By suddi9

Leave a Reply

Your email address will not be published. Required fields are marked *