ಬಂಟ್ವಾಳ: ಮಂಗಳೂರಿನಲ್ಲಿ ಗುರುವಾರ ನಡೆದ ಹಿಂಸಾಚಾರ ಘಟನೆಯ ಬಗ್ಗೆ ರಾಜ್ಯ ಸರಕಾರವು ಸಮಗ್ರ ತನಿಖೆಗೊಳಪಡಿಸಿ ಸಾರ್ವಜನಿಕ ಆಸ್ತಿಪಾಸ್ತಿಗೆ ನಷ್ಟವನ್ನುಂಟು ಮಾಡಿದವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರಗಿಸಬೇಕು ಮತ್ತು ಜಿಲ್ಲೆಯಲ್ಲಿ ಶಾಂತಿಯ ವಾತಾವರಣ ಸೃಷ್ಠಿಸಲು ಜಿಲ್ಲಾಡಳಿತ ಹಾಗೂ ಜಿಲ್ಲೆಯ ಎಲ್ಲ ಜನಪ್ರತಿನಿ„ಗಳು ಪ್ರಯತ್ನಿಸಬೇಕು ಎಂದು ಬಿಜೆಪಿ ಮುಖಂಡ, ಬಂಟ್ವಾಳ ತಾ.ಪಂ.ಸದಸ್ಯ ಪ್ರಭಾಕರ ಪ್ರಭು ಅವರು ಮನವಿ ಮಾಡಿದ್ದಾರೆ.
ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ) ವಿರೋ„ಸಿ ಮಂಗಳೂರಿನಲ್ಲಿ ನಡೆದ ಹಿಂಸಾಚಾರಕ್ಕೆ ಅಮಾಯಕರಿಬ್ಬರು ಬಲಿಯಾಗಲು ಶಾಸಕ ಯು.ಟಿ.ಖಾದರ್ ಅವರ ಪ್ರಚೋದನಾತ್ಮಕ ಮಾತುಗಳೇ ಕಾರಣ ಎಂದು ಅವರು ಆರೋಪಿಸಿದ್ದಾರೆ.ಕೇಂದ್ರ ಸರಕಾರ ಜಾರಿಗೆ ತಂದ ಪೌರತ್ವ ತಿದ್ದುಪಡಿ ಕಾಯ್ದೆ ಯ ಸ್ಥೂಲ ಅಂಶಗಳನ್ನು ಸರಿಯಾಗಿ ಪರಿಗಣಿಸದೆ ಕಾಯ್ದೆಗೆ ಕರ್ನಾಟಕದಲ್ಲಿ ಅವಕಾಶ ನೀಡುವುದಿಲ್ಲ. ರಾಜ್ಯದಲ್ಲಿ ಜಾರಿಗೆ ಬಂದಲ್ಲಿ ರಾಜ್ಯ ಬೆಂಕಿಯಿಂದ ಉರಿಯಲಿದೆ ಎಂದು ಜವಾಬ್ದಾರಿಯುತ ಜನಪ್ರತಿನಿ„ಯಾಗಿ ಮಾತನಾಡಿದ ಹಿನ್ನೆಲೆಯಲ್ಲಿ ಸ್ಪಷ್ಟ ವಿಚಾರಗಳನ್ನು ಅರಿಯದ ಮುಗ್ಧ ಜನತೆ ಏಕಾಏಕಿ ಪ್ರತಿಭಟನೆಗೆ ಮುಂದಾಗಿ ಸಾರ್ವಜನಿಕ ಆಸ್ತಿಪಾಸ್ತಿಗಳನ್ನು ಧ್ವಂಸಗೊಳಿಸಿದ್ದಲ್ಲದೆ, ಉದ್ರಿಕ್ತ ಗುಂಪು ಪೆÇಲೀಸರ ಮೇಲೇಯೇ ತಿರುಗಿಬಿದ್ದ ಹಿನ್ನೆಲೆಯಲ್ಲಿ ಪೆÇಲೀಸರು ಅನಿವಾರ್ಯವಾಗಿ ಇಂತಹ ಕಠಿಣ ಕ್ರಮಕ್ಕೆ ಮುಂದಾಗಬೇಕಾಯಿತು ಎಂದು ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಎರಡು ವರ್ಷದ ಹಿಂದೆ ಇದೇ ರೀತಿಯ ಪ್ರಚೋದನಾತ್ಮಕವಾಗಿ ಹೇಳಿಕೆಯ ಪ್ರಕರಣಕ್ಕೆ ಸಂಬಂ„ಸಿ ಬೀದಿಯಲ್ಲಿ ನಿಂತು ಟೀಕಾ ಪ್ರಹಾರ ಮಾಡುತ್ತಿದ್ದ ಜಿಲ್ಲೆಯ ಬುದ್ದಿ ಜೀವಿಗಳು, ಪ್ರಗತಿಪರ ಸಂಘಟನೆಯ ಮುಖಂಡರು ಈಗ ಯಾಕೆ ಮಾತನಾಡುತ್ತಿಲ್ಲ ಎಂದು ಪ್ರಶ್ನಿಸಿರುವ ಅವರು ಇವರ ಈ ನಡವಳಿಕೆ ಸಾರ್ವಜನಿಕ ವಲಯದಲ್ಲಿ ಅನುಮಾನಕ್ಕೆ ಎಡೆ ಮಾಡಿದೆ ಎಂದು ಅವರು ದೂರಿದ್ದಾರೆ.ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ) ವಿಚಾರವಾಗಿ ಅಧ್ಯಯನ ಮಾಡಿರುವ ದೇಶದ ಹಲವಾರು ಅಲ್ಪ ಸಂಖ್ಯಾತ ಮುಖಂಡರು ಸಹಿತ ದೆಹಲಿಯ ಪ್ರತಿಷ್ಠಿತ ಧಾರ್ಮಿಕ ಅಲ್ಪ ಸಂಖ್ಯಾತ ಮುಖಂಡರೊಬ್ಬರು ಕೂಡಾ ಈ ಕಾಯ್ದೆಯನ್ನು ಸಮರ್ಥಿಸಿ ಇದರಿಂದ ಅಲ್ಪ ಸಂಖ್ಯಾತ ಮುಸ್ಲಿಂ ಸಮುದಾಯಕ್ಕೆ ಸಂದೇಶ ರವಾನಿಸಿದ್ದರೂ ಈ ಕಾಯ್ದೆಯನ್ನು ವಿರೋ„ಸಿ ರಾಜಕೀಯ ಪ್ರೇರಿತವಾಗಿ ಪ್ರತಿಭಟನೆ ನಡೆಸಲಾಗುತ್ತಿದೆ ಎಂದು ಅವರು ಆಪಾದಿಸಿದ್ದಾರೆ