ಉಡುಪಿ : ರಾಜ್ಯದ ಪ್ರಮುಖ ಜಿಲ್ಲೆಗಳಾದ ಮಂಗಳೂರು, ಮೈಸೂರು,ಬೆಳಗಾವಿ ಕಲಬುರಗಿ ಹಾಗೂ ಹುಬ್ಬಳ್ಳಿ ವಿಮಾನ ನಿಲ್ದಾಣಗಳಿಗೆ ಆಯಾ ಜಿಲ್ಲೆಯ ಐತಿಹಾಸಿಕ ಸಾಧಕರ ಹೆಸರು ಮರುನಾಮಕರಣ ಮಾಡಲು ಸರ್ಕಾರ ನಿರ್ಧರಿಸಿದೆ. ಈಗಾಗಲೇ ಬೆಂಗಳೂರಿನ ದೇವನಹಳ್ಳಿ ವಿಮಾನ ನಿಲ್ದಾಣಕ್ಕೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ನಾಮಕರಣ ಮಾಡಲಾಗಿತ್ತು, ಅಲ್ಲದೆ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಹಾಗೂ ಬೆಳಗಾವಿ ವಿಮಾನ ನಿಲ್ದಾಣಕ್ಕೆ ಕಿತ್ತೂರು ರಾಣಿ ಚನ್ನಮ್ಮ ಹೆಸರನ್ನು ಇಡಲು ಈ ಹಿಂದೆ ಎಚ್‌.ಡಿ.ಕುಮಾರಸ್ವಾಮಿ ನೇತೃತ್ವದ ಮೈತ್ರಿ ಸರ್ಕಾರ ನಿರ್ಧರಿಸಿತ್ತು.

hu

ಆದರೆ ಅದು ಕಾರಣಾಂತರದಿಂದ ಕಾರ್ಯರೂಪಕ್ಕೆ ತರಲು ಸಾದ್ಯವಾಗಲಿಲ್ಲ.ಈ ಕುರಿತು ಮತ್ತೆ ರಾಜಕೀಯ ನಾಯಕರು ಹಾಗು ವಿವಿಧ ಸಂಘ ಸಂಸ್ಥೆಗಳು ಪ್ರತಿಭಟನೆ ನಡೆಸಿದ್ದರು, ಅಲ್ಲದೆ ಬಿಜೆಪಿ ಸರ್ಕಾರ ಅಧಿಕಾರಿಗಳಿಗೆ ಪತ್ರ ಬರೆದು ಮನವಿ ಸಲ್ಲಿಸಿದ್ದರು. ಇದರ ಪ್ರತಿಫಲವಾಗಿ ಮೂಲಸೌಲಭ್ಯ ಅಭಿವೃದ್ಧಿ ಇಲಾಖೆಯ ಅಧೀನ ಕಾರ್ಯದರ್ಶಿಗಳು ಪತ್ರದ ಮೂಲಕ ತಮ್ಮ ಜಿಲ್ಲೆಯ ಐತಿಹಾಸಿಕ ಪ್ರಸಿದ್ಧ ಹೆಸರುಗಳನ್ನು ಗುರುತಿಸಿ ಮಾಹಿತಿ ಒದಗಿಸುವಂತೆ ಆಯಾ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದ್ದಾರೆ. ಈ ಮೂಲಕ ಇನ್ಮುಂದೆ ರಾಜ್ಯದ 5 ವಿಮಾನ ನಿಲ್ದಾಣಗಳು ಐತಿಹಾಸಿಕ ಸಾಧಕರ ಹೆಸರಿನಿಂದ ಕರೆಯಲ್ಪಡುತ್ತದೆ.

By suddi9

Leave a Reply

Your email address will not be published. Required fields are marked *