ಬಂಟ್ವಾಳ : ಪರವಾನಿಗೆ ಇಲ್ಲದೆ ಅಕ್ರಮವಾಗಿ ಮರದ ದಿಮ್ಮಿಗಳನ್ನು ಸಾಗಾಟದ ಆರೋಪದ ಮೇರೆಗೆ ವಾಹನ ಸಹಿತ ಆರೋಪಿಯೋರ್ವನನ್ನು ಅರಣ್ಯಾಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಪಿಕಪ್ ವಾಹನ ಚಾಲಕ ಐವನ್ ಅರುಣ್ ಮಿನೇಜಸ್ ಎಂಬಾತನ್ನು ಬಂಧಿಸಲಾಗಿದ್ದು, ಜಾಮೀನಿನ ಮೇಲೆ ಬಿಡುಗಡೆಗೊಳಿಸಲಾಗಿದೆ. ವಶಕ್ಕೆ ಪಡೆದುಕೊಂಡ ಸೊತ್ತುಗಳ ಮೌಲ್ಯ 3 ಲಕ್ಷ ರೂ. ಎಂದು ಅರಣ್ಯಾಧಿಕಾರಿಗಳು ತಿಳಿಸಿದ್ದಾರೆ.
ಬಂಟ್ವಾಳ ತಾಲೂಕಿನ ಪಾಣೆಮಂಗಳೂರು ಸಮೀಪ ಪಿಕಪ್ ವಾಹನವೊಂದರಲ್ಲಿ ಅಕ್ರಮವಾಗಿ ಮರದ ದಿಮ್ಮಿಗಳನ್ನು ಸಾಗಾಟ ಮಾಡುತ್ತಿದ್ದಾಗ ಬಂಟ್ವಾಳ ವಲಯದ ಅರಣ್ಯಾಧಿಕಾರಿಗಳು ಪತ್ತೆ ಹಚ್ಚಿದ್ದಾರೆ. ವಲಯ ಅರಣ್ಯಾಧಿಕಾರಿ ಬಿ.ಸುರೇಶ್, ಉಪ ಅರಣ್ಯಾಧಿಕಾರಿ ಯಶೋಧರ, ಅರಣ್ಯ ರಕ್ಷಕರಾದ ಜೀತೇಶ್ ಪಿ., ದಯಾನಂದ, ವಿನಯ್ ಕುಮಾರ್, ವೀಕ್ಷಕ ಪ್ರವೀಣ್ ಕಾರ್ಯಚರಣೆ ಪಾಲ್ಗೊಂಡಿದ್ದರು. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಡಿಸಿಎಫ್ ಕರಿಕಲನ್ ಅವರ ಮಾರ್ಗದರ್ಶನದಲ್ಲಿ ಎಸಿಎಫ್ ಶಂಕರೇ ಗೌಡ ಅವರುಮುಂದಿನ ತನಿಖೆಯನ್ನು ನಡೆಸುತ್ತಿದ್ದಾರೆ.


