ಬಂಟ್ವಾಳ : ಬಂಟ್ವಾಳ ತಾಲೂಕಿನ ಬರಿಮಾರ್ ಗ್ರಾಮದ ಮುಳಿಬೈಲು ನಿವಾಸಿಯಾದ ಜೀವಿತ್ ಕುಮಾರ್ ಎಂಬವರು ಅನಾರೋಗ್ಯದಿಂದ ಬಳಲುತ್ತಿದ್ದು ಇವರ ಸಂಬಂಧಿಕರಿಗೆ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ರೂ.1,00,000/- ಮುಖ್ಯಮಂತ್ರಿ ಪರಿಹಾರ ನಿಧಿಯ ಚೆಕ್‍ನ್ನು ಶಾಸಕರ ಕಚೇರಿಯಲ್ಲಿ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಜಿ.ಪಂ ಸದಸ್ಯೆ ಕಮಲಾಕ್ಷಿ ಪೂಜಾರಿ, ಗ್ರಾ.ಪಂ ಸದಸ್ಯರಾದ ಹರಿಕೃಷ್ಣ ಬರಿಮಾರ್ ಉಪಸ್ಥಿರಿದ್ದರು.
