ಮಂಗಳೂರು: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಮಾ. 7 ಮತ್ತು 8 ರಂದು ಮಂಗಳೂರಿನ ಪುರಭವನದಲ್ಲಿ ಪತ್ರಕರ್ತರ 35 ನೇ ರಾಜ್ಯ ಸಮ್ಮೇಳನ ನಡೆಯಲಿದೆ. ಈ ನಿಟ್ಟಿನಲ್ಲಿ
ಸಮ್ಮೇಳನ ಕೈಪಿಡಿ ಬಿಡುಗಡೆಯಾಯಿತು.
ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ಡಿ.ವೇದವ್ಯಾಸ್ ಕಾಮತ್ ಬಿಡುಗಡೆ ಮಾಡಿದರು.ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಅಧ್ಯಕ್ಷತೆ ವಹಿಸಿದರು .
ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಡಾ.ಭರತ್ ಶೆಟ್ಟಿ, ಸಿಟಿ ಬಸ್ ಮಾಲೀಕರ ಸಂಘದ ಅಧ್ಯಕ್ಷ ದಿಲ್ ರಾಜ್ ಆಳ್ವ, ವಾರ್ತಾಧಿಕಾರಿ ಖಾದರ್ ಷಾ, ಪತ್ರಕರ್ತ ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಬಾಳ ಜಗನ್ನಾಥ ಶೆಟ್ಟಿ ಮುಖ್ಯ ಅತಿಥಿಯಾಗಿ ಭಾಗವಹಿಸಿದರು.