ನವದೆಹಲಿ: ನವದೆಹಲಿಯ ಸುಭಾಷ್ ಮೈದಾನದಲ್ಲಿ ನಡೆದ ದಸರಾ ಸಂಭ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ರಾಮ–ಲಕ್ಷ್ಮಣರ ವೇಷ ಧರಿಸಿದ್ದ ಕಲಾವಿದರಿಗೆ ಆರತಿ ಬೆಳಗಿದರು. ರಾಷ್ಟ್ರಪತಿ ಪ್ರಣವ್ ಮುಖರ್ಜಿ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಈ ಸಂದರ್ಭದಲ್ಲಿ ಹಾಜರಿದ್ದರು.
