ಬಂಟ್ವಾಳ: ತಾಲೂಕಿನ ಕಾವಳಪಡೂರು ಗ್ರಾಮದ ಮದ್ವದ 50 ಕುಟುಂಬಗಳಿಗೆ ದಿನ ಬಳಕೆಯ ಸಾಮಗ್ರಿಗಳನ್ನು ಮಾಜಿ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಬಿ ರಮಾನಾಥ ರೈ ಯವರ ನೇತೃತ್ವದಲ್ಲಿ ಕಿಟ್ ವಿತರಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಸದಸ್ಯರಾದ ಪದ್ಮಶೇಖರ್ ಜೈನ್,ಬಂಟ್ವಾಳ ಬ್ಲಾಕ್ ಅಧ್ಯಕ್ಷರಾದ ಬೇಬಿ ಕುಂದರ್,ತಾಲೂಕು ಪಂಚಾಯತ್ ಸದಸ್ಯರಾದ ಶ್ರೀಮತಿ ಧನಲಕ್ಷ್ಮೀ,ಚಂದ್ರಶೇಖರ್ ಮದ್ವ.ಅಲ್ಪಸಂಖ್ಯಾತ ಘಟಕದ ಮಾಜಿ ಅಧ್ಯಕ್ಷರಾದ ಅಬ್ದುಲ್ ಲತೀಫ್,ಗ್ರಾಮ ಪಂಚಾಯತ್ ಸದಸ್ಯರಾದ ವೀರೇಂದ್ರ ಅಮೀನ್ ಮೊದಲಾದವರು ಉಪಸ್ಥಿತರಿದ್ದರು.