ಬಂಟ್ವಾಳ :  ಶಾಸಕ ರಾಜೇಶ್ ನಾಯ್ಕ್  ಉಳಿಪ್ಪಾಡಿಗುತ್ತು ಅವರು ಬುಧವಾರ ಬಂಟ್ವಾಳ ಕ್ಷೇತ್ರದವೀರಕಂಭ,ಕಡೇಶ್ವಾಲ್ಯ,ನೆಟ್ಲಮುಡ್ನೂರು, ಅನಂತಾಡಿ ಗ್ರಾಮ ಪಂಚಾಯತ್‌ಗಳಿಗೆ ಭೇಟಿ ನೀಡಿ ಕೊರೊನಾ-೧೯ ತಡೆಗಾಗಿ ರಚನೆಗೊಂಡಿರುವ ಟಾಸ್ಕ್ ಪೋರ್ಸ್ ಸಮಿತಿಗಳ ಸದಸ್ಯರ ಸಭೆ ನಡೆಸಿದರು.IMG-20200415-WA0030

ಸಭೆಯಲ್ಲಿ ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳಿಂದ ಆಯಾಯ ಪಂಚಾಯತ್‌ಗಳಲ್ಲಿ ಕೈಗೊಂಡಿರುವ ಕ್ರಮಗಳ ಕುರಿತು ಮಾಹಿತಿ ಪಡೆದರು. ದುಡಿಯಲು ಬಂದ ವಲಸೆ ಕಾರ್ಮಿಕರು ಸಹಿತ ಯಾಾರ ರಬ್ಬರು ಕೂಡ ಹಸಿವಿನಿಂದ ಇರದಂತೆ ನೋಡಿಕೊಳ್ಳಬೇಕು ನ್ಯಾಯ ಬೆಲೆ ಅಂಗಡಿಗಳಲ್ಲಿ    ಸಮರ್ಪಕ ಅಕ್ಕಿ ವಿತರಣೆಗೆ ಕ್ರಮಕೈಗೊಳ್ಳುವಂತೆ ಅಧಿಕಾರಿಗಳಿಗೆ ಶಾಸಕರು ಸೂಚಿಸಿದರು.

ಸಭೆಯಲ್ಲಿ ಜಿ.ಪಂ.ಸದಸ್ಯರಾದ ಮಂಜುಳಾ ಮಾವೆ, ಕಮಲಾಕ್ಷಿ ಪೂಜಾರಿ, ಉಪಾಧ್ಯಕ್ಷ ಅಬ್ಬಾಸ್ ಆಲಿ, ಕಾರ್ಯನಿರ್ವಹಣಾಧಿಕಾರಿ ರಾಜಣ್ಣ, ವೀರಕಂಭ ಗ್ರಾ.ಪಂ.ಅಧ್ಯಕ್ಷೆ ಪುಪ್ಪಲತಾ, ಕಡೇಶ್ವಾಲ್ಯ ಗ್ರಾ.ಪಂ.ಅಧ್ಯಕ್ಷೆ ಶ್ಯಮಲಾ ಶೆಟ್ಟಿ, ನೆಟ್ಲಮುಡ್ನೂರು ಗ್ರಾ.ಪಂ.ಅಧ್ಯಕ್ಷೆ ವಿಜಯ, ಅನಂತಾಡಿ ಗ್ರಾಪಂ ಅಧ್ಯಕ್ಷ ಸನತ್ ಕುಮಾರ್ ರೈ ಗ್ರಾ.ಪಂ.ಉಪಾಧ್ಯಕ್ಷರು, ಸದಸ್ಯರು, ಅಭಿವೃದ್ಧಿ ಅಧಿಕಾರಿಗಳು,ಬೀಟ್ ಪೋಲಿಸರು ಮೊದಲಾದವರು ಉಪಸ್ಥಿತರಿದ್ದರು.

By suddi9

Leave a Reply

Your email address will not be published. Required fields are marked *