ಬಂಟ್ವಾಳ : ದಕ್ಷಿಣ ಕನ್ನಡ ನಿರ್ಮಿತಿ ಕೇಂದ್ರ ಮಂಗಳೂರು ಇವರು ಒದಗಿಸಿರುವ ಸುಮಾರು 35,000 ಸಾ.ರೂ. ಮೌಲ್ಯದ ಕೋವಿದ್ 19 ಗಂಟಲು ದ್ರವದ ಮಾದರಿ ಸಂಗ್ರಹಣ ಕೇಂದ್ರವನ್ನು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಬಂಟ್ವಾಳ ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ಶುಕ್ರವಾರ ಹಸ್ತಾಂತರಿಸಿದರು.
ಈ ಸಂಧರ್ಭದಲ್ಲಿ ತಾಲೂಕು ಆರೋಗ್ಯಾಧಿಕಾರಿ ಡಾ.ದೀಪಾ ಪ್ರಭು, ಆಸ್ಪತ್ರೆಯ ಆಡಳಿತಾಧಿಕಾರಿ ಡಾ.ಪುಷ್ಪಲತಾ, ನಿರ್ಮಿತಿ ಕೇಂದ್ರ ಆಡಳಿತ ನಿರ್ದೇಶಕ ರಾಜೇಂದ್ರ ಕಲ್ಬಾವಿ ಮೊದಲಾದವರು ಉಪಸ್ಥಿತರಿದ್ದರು .