ಬಂಟ್ವಾಳ: ಸಜೀಪಮುನ್ನೂರು ಗ್ರಾಪಂ ಕಚೇರಿ ಮುಂಭಾಗ ಮಾರ್ನ ಬೈಲ್ ಎಂಬಲ್ಲಿ ಮರದ ದಿಮ್ಮಿ ಹೇರಿಕೊಂಡು ಸಂಚರಿಸುತ್ತಿದ್ದ ಲಾರಿಯೊಂದು ಚಾಲಕನ ಹತೋಟಿ ತಪ್ಪಿ ರಸ್ತೆಬದಿಯ ವಿದ್ಯುತ್ ಕಂಬಕ್ಕೆ ಬಡಿದು ಉರುಳಿಬಿದ್ದ ಘಟನೆ ಶುಕ್ರವಾರ ನಡೆದಿದೆ.
ಈ ಘಟನೆಯಿಂದ ಯಾವುದೇ ಪ್ರಾಣಾಪಾಯ ಉಂಟಾಗಿಲ್ಲ,ಲಾರಿ ಮಾತ್ರ ಸಂಪೂರ್ಣ ಜಖಂಗೊಂಡಿದೆ.ರಸ್ತೆ ಬದಿಯ ಮೂರು ವಿದ್ಯುತ್ ಕಂಬಗಳು ಧರಾಶಾಹಿಯಾಗಿದೆ.ಬಂಟ್ವಾಳ ಟ್ರಾಫಿಕ್ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿ ಮುಂದಿನ ಕ್ತಮಕೈಗೊಂಡರು.
