ಬಂಟ್ವಾಳ: ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತ (ಕಿಯೋನಿಕ್ಸ್) ಸಂಸ್ಥೆಯ ಅಧ್ಯಕ್ಷರಾಗಿ ರಾಜ್ಯ ಸರಕಾರದಿಂದ ನೇಮಕವಾದ ಕೆ. ಹರಿಕೃಷ್ಣ ಬಂಟ್ವಾಳ ಶನಿವಾರ ಮಧ್ಯಾಹ್ನ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರ ಕಚೇರಿಗೆ ಭೇಟಿ ನೀಡಿದ ಸಂದರ್ಭ ಅವರನ್ನು ಅಭಿನಂದಿಸಲಾಯಿತು.
ಶಾಸಕ ರಾಜೇಶ್ ನಾಯ್ಕ್ ಅವರು ಹಾರ ಹಾಕಿ ಶಾಲು ಹೊದೆಸುವ ಮೂಲಕ ಹರಿಕೃಷ್ಣ ಬಂಟ್ವಾಳರವರನ್ನು ಅಭಿನಂದಿಸಿದರು. ಹಿರಿಯ ರಾಜಕಾರಿಣಿಯಾಗಿದ್ದು ರಾಜಕೀಯ, ಸಾಮಾಜಿಕ ಹಾಗೂ ಧಾರ್ಮಿಕ ಕ್ಷೇತ್ರದಲ್ಲಿ ಕೆಲಸವನ್ನು ಮಾಡಿ ಪ್ರಸ್ತುತ ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತ (ಕಿಯೋನಿಕ್ಸ್) ಸಂಸ್ಥೆಯ ಅಧ್ಯಕ್ಷರಾಗಿ ನೇಮಕವಾಗಿದ್ದು ಅತೀವ ಸಂತೋಷವಾಗಿದೆ ಎಂದರು. ಇವರ ಅವಧಿಯಲ್ಲಿ ಇನ್ನಷ್ಟು ಅಭಿವೃದ್ಧಿಯ ಕೆಲಸಗಳು ವಿದ್ಯುನ್ಮಾನ ನಿಗಮದಲ್ಲಿ ಆಗಲಿ ಎಂದು ಶುಭ ಹಾರೈಸಿದ ಶಾಸಕರು ಇವರ ನೇಮಕಕ್ಕೆ ಸಹಕರಿಸಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮತ್ತು ಬಿಜೆಪಿ ರಾಜಾಧ್ಯಕ್ಷರು, ಸಂಸದ ನಳಿನ್ ಕುಮಾರ್ ಕಟೀಲ್ ಅವರಿಗೂ ಧನ್ಯವಾದಗಳನ್ನು ಅರ್ಪಿಸುತ್ತೇನೆ ಎಂದರು.
ಈ ಸಂಧರ್ಭ ಬೂಡ ಅದ್ಯಕ್ಷರಾದ ಬಿ.ದೇವದಾಸ್ ಶೆಟ್ಟಿ, ಪ್ರಮುಖರರಾದ ಸೀತಾರಾಮ ಪೂಜಾರಿ, ರಮನಾಥ ರಾಯಿ, ಮನೋಜ್ ಕಳ್ಳಿಗೆ, ಪುಷ್ಪರಾಜ್ ಚೌಟ, ಶ್ರೀಕಾಂತ್ ಶೆಟ್ಟಿ, ಪ್ರವೀಣ್ ಗಟ್ಟಿ, ಯಶವಂತ ನಾಯ್ಕ ನಗ್ರಿ, ಪುರುಷೋತ್ತಮ, ನಿತ್ಯಪ್ರಕಾಶ್ ಬಂಟ್ವಾಳ ಮತ್ತಿತರು ಉಪಸ್ಥಿತರಿದ್ದರು. ಬಿಲ್ಲವ ಮುಖಂಡರಾಗಿರುವ ಹರಿಕೃಷ್ಣ ಬಂಟ್ವಾಳ ಅವರು ಸುದೀರ್ಘ ರಾಜಕೀಯ ಅನುಭವ ಹೊಂದಿದವರು.ಅಪ್ರತಿಮ ವಾಗ್ಮಿಯು ಆಗಿರುವ ಅವರು ಬಿಲ್ಲವ ಮಹಾಮಂಡಲದ ವಕ್ತಾರರಾಗಿ ಹಾಗೂ ಬಂಟ್ವಾಳ ತಾಲೂಕು ಬಿಲ್ಲವ ಸಂಘದ ಮಾಜಿ ಅಧ್ಯಕ್ಷರಾಗಿಯು ಅಗಿ ಸೇವೆಸಲ್ಲಿಸಿದ್ದರು.ರಾಜಕೀಯ ಮಾತ್ರವಲ್ಲ ಸಾಮಾಜಿಕ,ಧಾರ್ಮಿಕ ಕ್ಷೇತ್ರದಲ್ಲು ಸಕ್ರಿಯವಾಗಿ ತೊಡಗಿಸಿಕೊಂಡವರಾಗಿದ್ದಾರೆ. ಬಿಜೆಪಿ ಜಿಲ್ಲಾ ವಕ್ತಾರರಾಗಿದ್ದ ಹರಿಕೃಷ್ಣ ಬಂಟ್ವಾಳ್ ಪ್ರಸ್ತುತ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾಗಿದ್ದಾರೆ. ಕಳೆದ ವಿಧಾನಸಭಾ ಚಿನಾವಣಾ ಸಂದರ್ಭ ಬಿಜೆಪಿ ಸೇರ್ಪಡೆಯಾಗಿದ್ದ ಅವರು ಬಂಟ್ವಾಳದಲ್ಲಿ ಬಿಜೆಪಿಯ ರಾಜೇಶ್ ನಾಯ್ಕ್ ಅವರ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಹಾಗೆಯೇ ಲೋಕಸಭಾ ಚುನಾವಣಾ ಸಂದರ್ಭದಲ್ಲು ನಳಿನ್ ಕುಮಾರ್ ಕಟೀಲ್ ಪರ ಚುನಾವಣಾ ಪ್ರಚಾರದಲ್ಲು ಮುಂಚೂಣಿಯಲ್ಲಿದ್ದರು.
