ಬಂಟ್ವಾಳ : ಬಂಟ್ವಾಳ ತಾ. ಇರ್ವತ್ತೂರು ಗ್ರಾಮ ಪಂಚಾಯತ್ ಮತ್ತು ಸಾಮಾಜಿಕ ಅರಣ್ಯ ಬಂಟ್ವಾಳ ವಲಯ ಇವರ ಜಂಟಿ ಸಹಭಾಗಿತ್ವದಲ್ಲಿ ಹಸಿರು ಕರ್ನಾಟಕ ಕಾರ್ಯಕ್ರಮದನ್ವಯ ಮಹಾತ್ಮ ಗಾಂ„ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಮನೆಗಳಲ್ಲಿ ಸುಮಾರು ಮೂರು ಸಾವಿರ ಗಿಡಗಳನ್ನು ನೆಡುವ ಕಾರ್ಯಕ್ರಮಕ್ಕೆ ಬುಧವಾರ ಗ್ರಾ.ಪಂ. ಕಚೇರಿ ವಠಾರದಲ್ಲಿ ಚಾಲನೆ ನೀಡಲಾಯಿತು.1507pkt4

ಸಾಮಾಜಿಕ ಅರಣ್ಯ ಬಂಟ್ವಾಳದ ವಲಯ ಅರಣ್ಯಾ„ಕಾರಿ ರಾಜೇಶ್ ಬಳಿಗಾರ್ ಅವರು ಸಸಿ ನೆಡುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಹಸಿರು ಕರ್ನಾಟಕ ಕಾರ್ಯಕ್ರಮವನ್ನು ಬಂಟ್ವಾಳ ತಾಲೂಕಿನಲ್ಲಿ ಪ್ರಸ್ತುತ ಸಾಲಿನಲ್ಲಿ ಪ್ರಥಮವಾಗಿ ಇರ್ವತ್ತೂರು ಗ್ರಾಮ ಪಂಚಾಯತ್‍ನಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಹೇಳಿದ ಅವರು ಸಾಮಾಜಿಕ ಅರಣ್ಯದ ವತಿಯಿಂದ ಅನುಷ್ಠಾನಗೊಳ್ಳುವ ವಿವಿಧ ಅರಣ್ಯೀಕರಣ ಯೋಜನೆಗಳ ಕುರಿತು ಮಾಹಿತಿ ನೀಡಿದರು.

ಪಂಚಾಯತ್ ಅಭಿವೃದ್ಧಿ ಅ„ಕಾರಿ ಅವಿನಾಶ್ ಬಿ. ಆರ್. ಅವರು ಯೋಜನೆಯನ್ನು ಅನುಷ್ಠಾನಗೊಳಿಸುವ ಬಗ್ಗೆ ಮಾಹಿತಿ ನೀಡಿ, ಸ್ವಸಹಾಯ ಸಂಘಗಳ ಮಹಿಳಾ ಸದಸ್ಯರಿಗೆ ಮಾತ್ರ ನರೆಗಾ ಯೋಜನೆಯಡಿ ಉದ್ಯೋಗ ಒದಗಿಸುವ ಮೂಲಕ ಅನುಷ್ಠಾನಗೊಳಿಸಲಾಗುತ್ತಿದೆ. ಸುಮಾರು 15 ಮಹಿಳಾ ಫಲಾನುಭವಿಗಳು ಈಗಾಗಲೇ ಉದ್ಯೋಗಕ್ಕೆ ಅರ್ಜಿ ಸಲ್ಲಿಸಿರುತ್ತಾರೆ. ಈ ಕಾರ್ಯಕ್ರಮದಡಿ ಸುಮಾರು 600 ಮಾನವ ದಿನಗಳ ಸೃಜನೆಗೆ ಅವಕಾಶವಿರುತ್ತದೆ ಎಂದು ಹೇಳಿದರು.

ಗ್ರಾ.ಪಂ. ನಿಕಟಪೂರ್ವ ಅಧ್ಯಕ್ಷೆ ಸುಜಾತಾ, ನಿಕಟಪೂರ್ವ ಉಪಾಧ್ಯಕ್ಷ ಶಂಕರ ಶೆಟ್ಟಿ ಬೆದ್ರಮಾರ್, ನಿಕಟಪೂರ್ವ ಸದಸ್ಯರಾದ ಜಯಾನಂದ ಕುಲಾಲ್, ಪ್ರಶಾಂತ್ ಕೋಟ್ಯಾನ್, ಸು„ೀಂದ್ರ ಶೆಟ್ಟಿ, ಜಯಶ್ರೀ, ಗ್ರಾ.ಪಂ. ಸಿಬಂದಿ ವರ್ಗ, ಮತ್ತಿತರರು ಉಪಸ್ಥಿತರಿದ್ದರು. ಪಂ.ಅ.ಅ„ಕಾರಿ ಅವಿನಾಶ್ ಬಿ.ಆರ್. ಸ್ವಾಗತಿಸಿದರು. ಕಾರ್ಯದರ್ಶಿ ನಾರಾಯಣ ನಾಯ್ಕ ಕೆ. ವಂದಿಸಿದರು. ಫಲಾನುಭವಿಗಳಿಗೆ ಹೊಳೆ ದಾಸವಾಳ, ಸಿಲ್ವರ್, ಬೀಟೀ, ಪೇರಳೆ, ನೆಲ್ಲಿ ಮುಂತಾದ ವಿವಿಧ ಜಾತಿಯ ಗಿಡಗಳನ್ನು ವಿತರಿಸಲಾಯಿತು.

By suddi9

Leave a Reply

Your email address will not be published. Required fields are marked *