ವಿಶಾಖಪಟ್ಟಣ: ಆಂಧ್ರಪ್ರದೇಶ ಮತ್ತು ಒಡಿಶಾ ಕರಾವಳಿ ತೀರಕ್ಕೆ ಹುಡ್-ಹುಡ್ ಚಂಡಮಾರುತ ಅಪ್ಪಳಿಸಿದ್ದು, ಕರಾವಳಿ ತೀರದಾದ್ಯಂತ ವ್ಯಾಪಕ ಬಿರುಗಾಳಿ ಸಹಿತ ಮಳೆ ಆರಂಭವಾಗಿದೆ. ಆಂಧ್ರಪ್ರದೇಶದ ಕರಾವಳಿ ತೀರ ಪ್ರದೇಶಕ್ಕೆ ಹುಡ್-ಹುಡ್ ಚಂಡಮಾರುತ ಅಪ್ಪಳಿಸಿದ್ದು, ಗಂಟೆಗೆ 180ರಿಂದ 195 ಕಿ.ಮೀ ವೇಗದಲ್ಲಿ ಚಂಡಮಾರುತ ಬೀಸುತ್ತಿದೆ.

ಚಂಡಮಾರುತದ ಪ್ರಭಾವಕ್ಕೆ ಸಿಲುಕಿರುವ ಶ್ರೀಕಾಕುಳಂ, ವಿಶಾಖಪಟ್ಟಣ ಮತ್ತು ಉಪ್ಪಾಡ ಬೀಚ್ ಮತ್ತು ಒಡಿಶಾದ ಕರಾವಳಿ ತೀರಗಳಲ್ಲಿ ಭಾರಿ ಬಿರುಗಾಳಿ ಸಹಿತ ಮಳೆಯಾಗುತ್ತಿದ್ದೆ. ವಿಶಾಖ ಪಟ್ಟಣ ಮತ್ತು ಶ್ರೀಕಾಕುಳಂನಲ್ಲಿ ಸಂಭವಿಸಿದ ಭೂಕುಸಿತದಿಂದಾಗಿ ಮೂವರು ಸಾವನ್ನಪ್ಪಿದ್ದಾರೆ ಹಾಗೂ ಒಡಿಶಾದ ಕರಾವಳಿಯಲ್ಲಿ ಇಬ್ಬರು ಸಾವಿಗೀಡಾಗಿದ್ದಾರೆ.
ಸಮುದ್ರ ತೀರಕ್ಕೆ ಹೋಗದಂತೆ ಪೊಲೀಸರು ಎಚ್ಚರಿಕೆ ನೀಡಿದ್ದಾರೆ. ಅಲ್ಲದೆ ಸಮುದ್ರ ತೀರಕ್ಕೆ ಸಂಪರ್ಕ ಕಲ್ಪಿಸುವ ಎಲ್ಲ ರಸ್ತೆಗಳನ್ನು ಮುಚ್ಚಲಾಗಿದ್ದು, ಸ್ಥಳೀಯರು ಸುರಕ್ಷಿತ ಪ್ರದೇಶಗಳಿಗೆ ತೆರಳುವಂತೆ ಸೂಚಿಸಲಾಗಿದೆ. ವಿಶಾಖಪಟ್ಟಣಂ ಸಮುದ್ರ ತೀರದಿಂದ 24 ಕಿ.ಮೀ ದೂರದಲ್ಲಿ ಕೇಂದ್ರಿತವಾಗಿರುವ ಹುಡ್-ಹುಡ್ ಚಂಡ ಮಾರುತ ಭಾರಿ ವೇಗದಲ್ಲಿ ಬೀಸುತ್ತಿದ್ದು, ಇದರ ಪರಿಣಾಮ ಇನ್ನು ನಾಲ್ಕು ದಿನಗಳ ಕಾಲ ಇರುತ್ತದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬಿರುಗಾಳಿ ಮಳೆಗೆ ತತ್ತರಿಸಿರುವ ವಿಶಾಖಪಟ್ಟಣದಲ್ಲಿ ಬಹುತೇಕ ಪ್ರದೇಶಗಳಲ್ಲಿ ವಿದ್ಯುತ್ ಸಂಪರ್ಕ