ಬಂಟ್ವಾಳ: ತಾಲೂಕಿನ ಪಂಜಿಕಲ್ಲು ಗ್ರಾಮದ ಬಂಡಸಾಲೆ ಮನೆ ನಿವಾಸಿ ನಾರಾಯಣ ಭಂಡಾರಿ ರವರ ಪುತ್ರಿ ಕು.ನಿಧಿ. ಬಿ.ಎನ್ ರವರು ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಪಿ.ಎಸ್.ಐ ನೇರ ನೇಮಕಾತಿ ಹುದ್ದೆಗೆ ಆಯ್ಕೆಯಾಗಿದ್ದಾರೆ. ಈ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಇಲಾಖಾ ವತಿಯಿಂದ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅವರನ್ನು ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಬಂಟ್ವಾಳ ಉಪವಿಭಾಗದ ಪೊಲೀಸ್ ಉಪಾಧೀಕ್ಷಕರಾದ ವೆಲೆಂಟೈನ್ ಡಿʻಸೋಜಾ , ಬಂಟ್ವಾಳ ವೃತ್ತ ನಿರೀಕ್ಷಕರಾದ ಟಿ.ಡಿ ನಾಗರಾಜ್ , ಬಂಟ್ವಾಳ ಗ್ರಾಮಾಂತರ ಠಾಣಾ ಪಿ.ಎಸ್.ಐ ಶ ಪ್ರಸನ್ನ. ಎಂ.ಎಸ್ ರವರು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.