ಬಂಟ್ವಾಳ: ಕರಾವಳಿ ಅಭಿವೃದ್ಧಿ ಪ್ರಾಧಿಕಾರದ 2017-18 ಸಾಲಿನ ಕ್ರಿಯಾ ಯೋಜನೆಯಲ್ಲಿ 20 ಲಕ್ಷ ಮಂಜೂರಾದ ಅನುದಾನದಲ್ಲಿ ಬಾಂಬಿಲ ಪದವು- ಮೂವ ರಸ್ತೆ ಕಾಂಕ್ರಿಟೀಕರಣ ರಸ್ತೆಯನ್ನು ಮಾಜಿ ಸಚಿವ ರಮಾನಾಥ ರೈ ಅವರು ಉದ್ಘಾಟಿಸಿದರು.
ಜಿಲ್ಲಾ ಪಂಚಾಯತ್ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ, ತಾಲೂಕು ಪಂಚಾಯತ್ ಸ್ಥಾಯಿ ಸಮಿತಿ ಅಧ್ಯಕ್ಷೆ ಮಲ್ಲಿಕಾ ವಿ ಶೆಟ್ಟಿ, ಬಾಂಬಿಲ ಚರ್ಚ್ ಧರ್ಮಗುರುಗಳಾದ ಪೀಟರ್ ಗೋನ್ಸಾಲ್ವಿಸ್,ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್ ಹಾಗೂ ಸ್ಥಳೀಯ ನಾಗರೀಕರು ಉಪಸ್ಥಿತರಿದ್ದರು.
