ಬೆಂಗಳೂರು: ಅತ್ಯಾಚಾರ ಆರೋಪಕ್ಕೆ ಸಿಲುಕಿಕೊಂಡಿರುವ ಹೊಸನಗರ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಸ್ವಾಮೀಜಿ ವಿಚಾರಣೆಯನ್ನು ಸಿಐಡಿ ಅಧಿಕಾರಿಗಳು ನಡೆಸುತ್ತಿರುವಂತೆಯೇ ಸೋಮವಾರದಂದು ಶ್ರೀಗಳ ಮೇಲೆ ಆರೋಪ ಮಾಡಿರುವ ಪ್ರೇಮಲತಾ ಅವರ ವಿಚಾರಣೆಯನ್ನು ಸಿಐಡಿ ಅಧಿಕಾರಿಗಳು ಶುರು ಮಾಡಿದ್ದಾರೆ.

ರಾಘವೇಶ್ವರ ಶ್ರೀಗಳ ಮೇಲೆ ಲೈಂಗಿಕ ಕಿರುಕುಳದ ಆರೋಪ ಹೊರಿಸಿರುವ ಪ್ರೇಮಲತಾ ಅವರ ವಿಚಾರಣೆ ಮಾಡುತ್ತಿದ್ದಾರೆ. ಬೆಳಗ್ಗೆ 8.30ಕ್ಕೆ ಪ್ರೇಮಲತಾ ಸಿಐಡಿ ಕಚೇರಿಗೆ ಆಗಮಿಸಿದ್ದು, ದೂರಿನ ಸಂಬಂಧ ಸಿಐಡಿ ಅಧಿಕಾರಿಗಳು ಪ್ರೇಮಲತಾ ಅವರಿಂದ ಹೆಚ್ಚಿನ ಮಾಹಿತಿ ಕಲೆ ಹಾಕುತ್ತಿದ್ದಾರೆ. ಪ್ರೇಮಲತಾ ಅವರು ತಾನು ಮಾಡಿರುವ ಆರೋಪದ ಬಗ್ಗೆ ಸಾಕ್ಷಾಧಾರಗಳೊಂದಿಗೆ ವಿವರಣೆ ನೀಡಿದರೆಂದು ತಿಳಿದು ಬಂದಿದೆ. ಇದೇ ವೇಳೆ ಇಂದು ಕೂಡಾ ರಾಘವೇಶ್ವರ ಶ್ರೀಗಳ ವಿಚಾರಣೆ ಮುಂದುವರಿಯಲಿದೆ.