ಬೆಂಗಳೂರು:ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರು ಮತ್ತು ಮಾನ್ಯ ಸಚಿವರಾದ ಎಸ್.ಅಂಗಾರ ರವರು, ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ, ಪುತ್ತೂರು ಶಾಸಕ ಸಂಜೀವ ಮಟಂದೂರು ಇವರ ನಿಯೋಗ ಗುರುವಾರ ಮಾನ್ಯ ಮುಖ್ಯಮಂತ್ರಿ ಯವರನ್ನು ಬೇಟಿ ಮಾಡಿ ಮನವಿ ನೀಡಿದರು.2bc7bfa2-2280-479d-8de6-adb85008d414

ಇತ್ತೀಚೆಗಿನ ಚಂಡಮಾರುತದಿಂದಾಗಿ ದಕ್ಷಿಣ ಕನ್ನಡ ಜಿಲ್ಲೆಯ ಹಾನಿಯ ಬಗ್ಗೆ ಜಿಲ್ಲೆಗೆ ಹೆಚ್ಚಿನ ಅನುದಾನ ಬಿಡುಗಡೆ ಗೊಳಿಸುವಂತೆ ಹಾಗೂ ಕೊರೊನಾ ನಿಯಂತ್ರಣಕ್ಕಾಗಿ ಜಿಲ್ಲೆಗೆ ಅಗತ್ಯ ಮೂಲಭೂತ ಸೌಕರ್ಯ, ವೈದ್ಯರು ದಾದಿಯರ ನೇಮಕಾತಿಗೊಳಿಸುವಂತೆ ಮನವಿ ಮಾಡಿದರು. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಿದರು. ಈ ಸಂದರ್ಭದಲ್ಲಿ ಮಾನ್ಯ ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಜೀವರಾಜ್ ಉಪಸ್ಥಿತರಿದ್ದರು.

By suddi9

Leave a Reply

Your email address will not be published. Required fields are marked *