ಬಂಟ್ವಾಳ:ಜನಪ್ರತಿನಿಧಿಗಳನ್ನು ವಿಶ್ವಾಸಕ್ಕೆ ಪಡೆದು ಅಧಿಕಾರಿಗಳು ಜವಬ್ದಾರಿಯುತವಾಗಿ ಕೆಲಸ ಮಾಡಬೇಕು. ಜನರ ಆರೋಗ್ಯದ ವಿಚಾರದಲ್ಲಿ ಉದಾಸೀನ ಮಾಡಕೂಡದು ಎಂದು ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು ಹೇಳಿದ್ದಾರೆ.ಇಲ್ಲಿನ ಪುರಸಭೆಯಲ್ಲಿ ಬುಧವಾರ ನಡೆದ 1 ರಿಂದ 5 ನೇ ವಾರ್ಡ್ ವ್ಯಾಪ್ತಿಯ ಟಾಸ್ಕ್ ಫೋರ್ಸ್ ಸಮಿತಿ ಪ್ರಗತಿಪರಿಶೀಲನಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.26btl-Purasabhe

ಈ ಕೋವಿಡ್ ಸಂಕಷ್ಟದ ಕಾಲ ಘಟ್ಟದಲ್ಲಿ ಅಧಿಕಾರಿಗಳು ಏಕಸಾಮ್ಯ ಮೆರೆಯುವ ಬದಲಾಗಿ ಜನಪ್ರತಿನಿಧಿಗಲೊಂದಿಗೆ ಸಮನ್ವಯ ಕಾಯ್ದುಕೊಳ್ಳಬೇಕು ಎಂದರು.ಪುರಸಭೆಯ ಟಾಸ್ಕ್ ಫೋರ್ಸ್ ಸಮಿತಿಗೆ ಆಯಾಯ ವಾರ್ಡ್ ಸದಸ್ಯರೇ ಮುಖ್ಯಸ್ಥರಾಗಿದ್ದು, ಸಮಿತಿ ಕಾರ್ಯವೈಖರಿ ಬಗ್ಗೆ ಪುರಸಭಾ ಅಧ್ಯಕ್ಷರು ಮೇಲ್ವಿಚಾರಣೆ ನಡೆಸಬೇಕು ಎಂದರು.

ತಹಶೀಲ್ದಾರ್ ರಶ್ಮಿ ಎಸ್.ಆರ್., ಪುರಸಭಾಧ್ಯಕ್ಷ ಮಹಮ್ಮದ್ ಶರೀಫ್ ಮಾತನಾಡಿದರು. ಇಲ್ಲಿನ ಪುರಸಭಾ ವ್ಯಾಪ್ತಿಯಲ್ಲಿ ಒಟ್ಟು 107 ಪಾಸಿಟಿವ್ ಪ್ರಕರಣ ವರದಿಯಾಗಿದ್ದು, ಪ್ರಸ್ತುತ 52 ಸಕ್ರಿಯ ಪ್ರಕರಣಗಳಿವೆ ಎಂದು ನಗರ ವೈದ್ಯಾಧಿಕಾರಿ ಡಾ.ಅಶ್ವಿನಿ ಮಾಹಿತಿ ನೀಡಿದರು. ಪುರಸಭಾ ಉಪಾಧ್ಯಕ್ಷೆ ಜೆಸಿಂತಾ ಡಿಸೋಜ, ಬೂಡ ಅಧ್ಯಕ್ಷ ಬಿ.ದೇವದಾಸ ಶೆಟ್ಟಿ, ಮುಖ್ಯಾಧಿಕಾರಿ ಲೀನಾ ಬ್ರಿಟ್ಟೋ, ಎಂಜಿನಿಯರ್ ಡೊಮಿನಿಕ ಡಿಮೆಲ್ಲೊ, ಪುರಸಭಾ ಸದಸ್ಯರಾದ ಜನಾರ್ಧನ ಚೆಂಡ್ತಿಮಾರ್, ಗಂಗಾಧರ ಪೂಜಾರಿ, ಮೀನಾಕ್ಷಿ ಗೌಡ, ರೇಖಾ ಪೈ, ದೇವಕಿ, ಸಿಡಿಪಿಒ ಗಾಯತ್ರಿ ಕಂಬಳಿ, ಎಎಸೈ ಜಿನ್ನಪ್ಪ ಗೌಡ, ಪ್ರಮುಖರಾದ ದೇವಪ್ಪ ಪೂಜಾರಿ, ಡೊಂಬಯ್ಯ ಅರಳ ಮತ್ತಿತರರು ಇದ್ದರು.
–

By suddi9

Leave a Reply

Your email address will not be published. Required fields are marked *