ಬಂಟ್ವಾಳ ತಾಲೂಕಿನ ಲೊರೆಟ್ಟೋ ಹಿಲ್ಸ್ ರೋಟರಿ ಕ್ಲಬ್ ವತಿಯಿಂದ ಈಚೆಗೆ ನಡೆದ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಹಿರಿಯ ಪತ್ರಕರ್ತರಾದ ಮೋಹನ್ ಕೆ.ಶ್ರೀಯಾನ್ ರಾಯಿ, ರತ್ನದೇವ್ ಪುಂಜಾಲಕಟ್ಟೆ, ಸಂದೀಪ್ ಸಾಲ್ಯಾನ್ ಇವರನ್ನು ಸನ್ಮಾನಿಸಲಾಯಿತು. ಕ್ಲಬ್ಬಿನ ಅಧ್ಯಕ್ಷ ರಾಘವೇಂದ್ರ ಭಟ್, ಸ್ಥಾಪಕಾಧ್ಯಕ್ಷ ಅವಿಲ್ ಮಿನೇಜಸ್, ಪೂರ್ವಾಧ್ಯಕ್ಷ ಎಂ.ಪದ್ಮರಾಜ ಬಲ್ಲಾಳ್, ನಿಕಟಪೂರ್ವ ಅಧ್ಯಕ್ಷ ಆಂಟನಿ ಸಿಕ್ವೇರಾ, ನಿವೃತ್ತ ಶಿಕ್ಷಕ ಕೆ.ರಮೇಶ ನಾಯಕ್, ರಾಮಚಂದ್ರ ಶೆಟ್ಟಿಗಾರ್, ವಕೀಲ ಸುರೇಶ ಶೆಟ್ಟಿ ಮತ್ತಿತರರು ಇದ್ದರು.