ಕೈಕಂಬ : ಗುರುಪುರ ಸರ್ಕಾರಿ ಪಿಯು ಕಾಲೇಜಿನ ವಿದ್ಯಾರ್ಥಿಗಳಿಗೆ ಕಂಪ್ಯೂಟರ್ ಕಲಿಕೆಗೆ ನೆರವಾಗುವ ದೃಷ್ಟಿಯಿಂದ ಗುರುಪುರ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ನಿಯಮಿತವು ಸುಮಾರು ೫೦,೦೦೦ ಮೌಲ್ಯದ ಕಂಪ್ಯೂಟರ್ ದೇಣಿಗೆಯಾಗಿ ನೀಡಿತು.
ಬ್ಯಾಂಕ್ನ ಸಭಾಗೃಹದಲ್ಲಿ ಬುಧವಾರ ನಡೆದ ಸರಳ ಸಮಾರಂಭದಲ್ಲಿ ಬ್ಯಾಂಕ್ ಅಧ್ಯಕ್ಷ ಓಂಪ್ರಕಾಶ್ ಶೆಟ್ಟಿಯವರು ಕಾಲೇಜಿನ ಪ್ರಾಂಶುಪಾಲ ಚಂದ್ರಶೇಖರ್ ಅವರಿಗೆ ಕಂಪ್ಯೂಟರ್ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಬ್ಯಾಂಕ್ನ ನಿರ್ದೇಶಕರಾದ ಸಚಿನ್ ಅಡಪ, ಜಿ ಎಂ ಉದಯ ಭಟ್, ನಳಿನಿ ಶೆಟ್ಟಿ ಕಿಶೋರ್ ಬೊಂಡಂತಿಲ, ಬ್ಯಾಂಕ್ ಮ್ಯಾನೇಜರ್ ನಾಗರಾಜ್ ಭಟ್, ಗುರುಪುರ ಪಂಚಾಯತ್ ಸದಸ್ಯ ಹರೀಶ್ ಬಳ್ಳಿ ಉಪಸ್ಥಿತರಿದ್ದರು. ಕಾಲೇಜಿನ ಉಪನ್ಯಾಸಕ ಕೇಶವ ಪೂಜಾರಿ ಸ್ವಾಗತಿಸಿ, ವಂದಿಸಿದರು.