ಬಂಟ್ವಾಳ: ಲೊರೆಟ್ಟೋಹಿಲ್ಸ್ ರೋಟರಿ ಕ್ಲಬ್ ವತಿಯಿಂದ ರಾಯಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಈಚೆಗೆ ನಡೆದ ಸಭಾ ಕಾರ್ಯಕ್ರಮದಲ್ಲಿ ರಾಯಿ ಅಂಚೆಯಣ್ಣ ರಮೇಶ ಪೂಜಾರಿ ಇವರನ್ನು ಸನ್ಮಾನಿಸಲಾಯಿತು. ಕ್ಲಬ್ಬಿನ ಅಧ್ಯಕ್ಷ ರಾಘವೇಂದ್ರ ಭಟ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಗ್ರಾಮ ಪಂಚಾಯಿತಿ ಸದಸ್ಯ ಸಂತೋಷ್ ಕುಮಾರ್ ಬೆಟ್ಟು, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ರಮೇಶ ಗೌಡ, ರಾಷ್ಟçಪ್ರಶಸ್ತಿ ಪುರಸ್ಕೃತ ನಿವೃತ್ತ್ ಮುಖ್ಯಶಿಕ್ಷಕ ಕೆ.ರಮೇಶ ನಾಯಕ್ ರಾಯಿ ಶುಭ ಹಾರೈಸಿದರು.13btl-Ramesh

ನಿವೃತ್ತ ಮುಖ್ಯಶಿಕ್ಷಕ ಸೋಮಪ್ಪ ಮಡಿವಾಳ ಸನ್ಮಾನಿತರನ್ನು ಪರಿಚಯಿಸಿದರು. ಇದೇ ವೇಳೆ ವಿದ್ಯಾರ್ಥಿಗಳಿಂದ ಗೀತ ಗಾಯನ ಕಾರ್ಯಕ್ರಮ ನಡೆಯಿತು. ಮುಖ್ಯಶಿಕ್ಷಕ ಜಯರಾಮ ಪಡ್ರೆ ಸ್ವಾಗತಿಸಿ, ದೈಹಿಕ ಶಿಕ್ಷಣ ಶಿಕ್ಷಕಿ ಗಾಯತ್ರಿದೇವಿ ವಂದಿಸಿದರು.

By suddi9

Leave a Reply

Your email address will not be published. Required fields are marked *