ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರ ಬೆಂಗಳೂರು ಪ್ರವಾಸ ಮುಂದೂಡಲಾಗಿದೆ. ಡಿಸೆಂಬರ್ 6 ರಂದು ಪ್ರಧಾನಿ ಮೋದಿ ಬೆಂಗಳೂರಿಗೆ ಆಗಮಿಸುವ ಬಗ್ಗೆ ಚರ್ಚೆ ನಡೆದಿತ್ತು. ಆದರೆ ಸಮಯಾವಕಾಶ ಸಿಗದ ಹಿನ್ನೆಲೆ ಪ್ರಧಾನಿ ರಾಜ್ಯ ಪ್ರವಾಸ ಮುಂದೂಡುವ ಸಾಧ್ಯತೆ ಇದೆ ಎಂಬ ಮಾಹಿತಿ ಸಿಕ್ಕಿದೆ.
ಪ್ರಧಾನಿ ಆಹ್ವಾನಿಸಿದ್ದ ಸಿಎಂ
ಪ್ರಧಾನಿ ನರೇಂದ್ರ ಮೋದಿ ಜೊತೆಗಿನ ಭೇಟಿ ಬಹಳ ಒಳ್ಳೆ ರೀತಿಯಲ್ಲಿ ಆಗಿದೆ. ಹಲವು ವಿಷಯಗಳ ಬಗ್ಗೆ ಚರ್ಚೆ ಮಾಡಿದ್ದೇವೆ. ನಾವು 100 ದಿನದಲ್ಲಿ ಕೈಗೊಂಡ ಕಾರ್ಯಕ್ರಮಗಳ ಬಗ್ಗೆ ಚರ್ಚೆ ನಡೆಸಿದೆ. ಇದೇ ವೇಳೆ ಡಿಸೆಂಬರ್ನಲ್ಲಿ ಬೆಂಗಳೂರಿಗೆ ಬರಲು ಆಹ್ವಾನಿಸಿದ್ದೇನೆ. 4 ಕಾರ್ಯಕ್ರಮಗಳಿಗೆ ಬರಲು ಆಹ್ವಾನಿಸಿದೆ. 2 ಕಾರ್ಯಕ್ರಮ ಮಾಡಿ ಬರುತ್ತೇನೆ. ಡಿಸೆಂಬರ್ನಲ್ಲಿ 2 ದಿನಾಂಕ ಕೊಟ್ರೆ ಬರುವುದಾಗಿ ಹೇಳಿದ್ದಾರೆ ಎಂದು ಪ್ರಧಾನಿ ಮೋದಿ ಹೇಳಿರುವುದಾಗಿ ದೆಹಲಿಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಈ ಹಿಂದೆ ತಿಳಿಸಿದ್ದರು
