ಬಂಟ್ವಾಳ: ತಾಲ್ಲೂಕಿನ ಕಳ್ಳಿಗೆ ಗ್ರಾಮದ ದೇವಂದಬೆಟ್ಟು ಶ್ರೀ ಲಕ್ಷ್ಮೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಬ್ರಹ್ಮಕಲಶ ಪ್ರಯುಕ್ತ ಭಾನುವಾರ ಪೂರ್ವಭಾವಿ ಸಮಾಲೋಚನಾ ಸಭೆ ನಡೆಯಿತು.10btl-Devandabettuಕಳ್ಳಿಗೆ ಗ್ರಾಮದ ದೇವಂದಬೆಟ್ಟು ಶ್ರೀ ಲಕ್ಷ್ಮೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಬ್ರಹ್ಮಕಲಶ ಪ್ರಯುಕ್ತ ಇದೇ ೧೨ರಂದು ಮಾತೃ ಸಮಾವೇಶ ನಡೆಯಲಿದೆ ಎಂದು ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರಮೇಶ್ ಉಪಾಧ್ಯಾಯ ಹೇಳಿದ್ದಾರೆ.

ದೇವಂದಬೆಟ್ಟು ಶ್ರೀ ಲಕ್ಷ್ಮೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಬ್ರಹ್ಮಕಲಶ ಪ್ರಯುಕ್ತ ಭಾನುವಾರ ನಡೆದ ಪೂರ್ವಭಾವಿ ಸಮಾಲೋಚನಾ ಸಭೆಯಲ್ಲಿ ಅವರು ಮಾತನಾಡಿದರು. ವ್ಯವಸ್ಥಾಪನಾ ಸಮಿತಿ ಕಾರ್ಯದರ್ಶಿ ದಾಮೋದರ ನೆತ್ತರಕೆ ಸಮಾವೇಶ ಬಗ್ಗೆ ಮಾಹಿತಿ ನೀಡಿದರು.

ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಸದಾನಂದ ಶೆಟ್ಟಿ ರಂಗೋಲಿ, ಸಂಚಾಲಕ ತೇವು ತಾರನಾಥ ಕೊಟ್ಟಾರಿ, ಗೌರವಾಧ್ಯಕ್ಷ ನವೀನ್ ಚಂದ್ರ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಗಣೇಶ್ ಸುವರ್ಣ ತುಂಬೆ, ಕೋಶಾಧಿಕಾರಿ ಕವಿರಾಜ್ ಚಂದ್ರಿಗೆ, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಪುರುಷೋತ್ತಮ ಕೊಟ್ಟಾರಿ ಮಾಡಂಗೆ, ಸತೀಶ್ ಶೆಟ್ಟಿ ಮೊಡಂಕಾಪು, ದಿವಾಕರ ಶೆಟ್ಟಿ ಕುಪ್ಪಿಲ, ಅರ್ಚಕ ರಾಧಾಕೃಷ್ಣ ಕಡಂಬಳಿತ್ತಾಯ, ಸಮಿತಿ ಉಪಾಧ್ಯಕ್ಷ ಜ್ಯೋತೀಂದ್ರ ಶೆಟ್ಟಿ ಮುಂಡಾಜೆಗುತ್ತು, ಸತೀಶ್ ಪಲ್ಲಮಜಲು, ದೇವಿಪ್ರಸಾದ್ ಎಂ ದೇವಂದಬೆಟ್ಟು, ವಿಶ್ವನಾಥ್ ಕುಲಾಲ್, ಪೂವಪ್ಪ ವಳವೂರು ಮತ್ತಿತರರು ಇದ್ದರು.

By suddi9

Leave a Reply

Your email address will not be published. Required fields are marked *