ಬಂಟ್ವಾಳ: ತಾಲ್ಲೂಕಿನ ಕಳ್ಳಿಗೆ ಗ್ರಾಮದ ದೇವಂದಬೆಟ್ಟು ಶ್ರೀ ಲಕ್ಷ್ಮೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಬ್ರಹ್ಮಕಲಶ ಪ್ರಯುಕ್ತ ಭಾನುವಾರ ಏರ್ಪಡಿಸಿದ್ದ ಮಾತೃ ಸಮಾವೇಶಕ್ಕೆ ಮಹರ್ಷಿ ಆನಂದ ಗುರೂಜಿ ಭೇಟಿ ನೀಡಿದರು.
ಮಾತೃ ಸಮಾವೇಶದ ಮೂಲಕ ಮುಂದೆ ನಡೆಯಲಿರುವ ದೇವಳದ ಬ್ರಹ್ಮಕಲಶೋತ್ಸವದ ಸಂಭ್ರಮದ ಕಳೆ ಮಾತೆಯರ ಕಣ್ಣಿನಲ್ಲಿ ಎದ್ದು ಕಾಣುತ್ತಿದೆ. ದೇವಳದ ಜೀರ್ಣೋದ್ಧಾರ ಮತ್ತು ಬ್ರಹ್ಮಕಲಶದಲ್ಲಿ ತೊಡಗಿಸಿಕೊಂಡಾಗ ಜೀವನ ಪಾವನವಾಗುತ್ತದೆ ಎಂದು ಮಹರ್ಷಿ ಆನಂದ ಗುರೂಜಿ ಹೇಳಿದ್ದಾರೆ.
ಕಳ್ಳಿಗೆ ಗ್ರಾಮದ ದೇವಂದಬೆಟ್ಟು ಶ್ರೀ ಲಕ್ಷ್ಮೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಬ್ರಹ್ಮಕಲಶ ಪ್ರಯುಕ್ತ ಭಾನುವಾರ ಏರ್ಪಡಿಸಿದ್ದ ಮಾತೃ ಸಮಾವೇಶದಲ್ಲಿ ಅವರು ಆಶೀರ್ವಚನ ನೀಡಿದರು.
ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರಮೇಶ್ ಉಪಾಧ್ಯಾಯ, ಬ್ರಹ್ಮಕಲಶ ಸಮಿತಿ ಅಧ್ಯಕ್ಷ ಸದಾನಂದ ಶೆಟ್ಟಿ ರಂಗೋಲಿ, ಗೌರವಾಧ್ಯಕ್ಷ ನವೀನ್ ಚಂದ್ರ ಶೆಟ್ಟಿ ಮುಂಡಾಜೆ, ಸಂಚಾಲಕ ತೇವು ತಾರನಾಥ ಕೊಟ್ಟಾರಿ, ಕೋಶಾಧಿಕಾರಿ ಕವಿರಾಜ್ ಚಂದ್ರಿಗೆ, ಪ್ರಧಾನ ಕಾರ್ಯದರ್ಶಿ ಗಣೇಶ್ ಸುವರ್ಣ ತುಂಬೆ, ವ್ಯವಸ್ಥಾಪನಾ ಸಮಿತಿ ಕಾರ್ಯದರ್ಶಿ ದಾಮೋದರ ನೆತ್ತರಕೆರೆ, ಸದಸ್ಯರಾದ ಸತೀಶ್ ಶೆಟ್ಟಿ ಮೊಡಂಕಾಪು, ಕೇಶವ ದೈಪಲ, ದಿವಾಕರ ಶೆಟ್ಟಿ ಕುಪ್ಪಿಲ, ಪುರುಷೋತ್ತಮ ಕೊಟ್ಟಾರಿ ಮಾಡಂಗೆ, ಅಮಿತಾ ವಿಶ್ವನಾಥ್ ದಾಸರಕೋಡಿ, ಉಮಾ ಲಿಂಗಪ್ಪ ತುಂಬೆ, ಪ್ರಮುಖರಾದ ರೇಣುಕಾ ದಿವಾಕರ ಪಂಬದಬೆಟ್ಟು, ಪ್ರತಿಭಾ ಪಿ. ಶೆಟ್ಟಿ ಮತ್ತಿತರರು ಇದ್ದರು.
ಆರಂಭದಲ್ಲಿ ಹುತಾತ್ಮ ವೀರ ಯೋಧರಿಗೆ ಶ್ರದ್ಧಾಂಜಲಿ ಸಮರ್ಪಿಸಲಾಯಿತು. ಪ್ರಸಾದ್ ಕುಮಾರ್ ಬಿ.ಸಿ.ರೋಡು ಭಾರತ ಮಾತೆಗೆ ಪುಷ್ಪಾರ್ಚನೆ ಮತ್ತು ಯೋಧರಿಗೆ ನುಡಿನಮನ ಸಲ್ಲಿಸಿದರು.