ಬೆಳಗಾವಿ: ಅರಣ್ಯ ಸಚಿವ ಉಮೇಶ್ ಕತ್ತಿ ಒಡೆತನದ ಸಕ್ಕರೆ ಕಾರ್ಖಾನೆಯಿಂದ ತ್ಯಾಜ್ಯ ನೀರನ್ನು ಹಳ್ಳಕ್ಕೆ ಬಿಡಲಾಗುತ್ತಿದೆ ಎಂದು ಹುಕ್ಕೇರಿ ತಾಲೂಕಿನ ಹಿರೇಬಾಗೇವಾಡಿ ಗ್ರಾಮಸ್ಥರು ಪ್ರತಿಭಟಿಸಿದ್ದಾರೆ.
ವಿಶ್ವರಾಜ ಶುಗರ್ಸ್ ಕಾರ್ಖಾನೆಯಿಂದ ತ್ಯಾಜ್ಯ ಮಿಶ್ರಿತ ನೀರನ್ನು ಹಳ್ಳಕ್ಕೆ ಬಿಡಲಾಗುತ್ತಿದೆ. ಇದರಿಂದ ಜಾಗನೂರು, ಪಾಮಲದಿನ್ನಿ, ಬಡಿಗವಾಡ, ರಾಜಾಪುರ ಗ್ರಾಮಗಳಲ್ಲಿ ತೊಂದರೆ ಆಗ್ತಿದೆ. ಈ ನೀರನ್ನು ಕುಡಿಯುತ್ತಿರುವ ಜಾನುವಾರುಗಳಲ್ಲಿ ಚರ್ಮರೋಗ ಬರುತ್ತಿದೆ.