ಬಂಟ್ವಾಳ: ತಾಲ್ಲೂಕಿನ ಬಿ.ಸಿ.ರೋಡು ಮಿನಿ ವಿಧಾನಸೌಧದಲ್ಲಿ ಶನಿವಾರ ನಡೆದ ತಾಲ್ಲೂಕು ಮಟ್ಟದ ಕಡತ ವಿಲೇವಾರಿ ಸಪ್ತಾಹ-೨೦೨೨ ಕಾರ್ಯಕ್ರಮ ಉದ್ಘಾಟಿಸಿ ಶಾಸಕ ರಾಜೇಶ ನಾಯ್ಕ್ ಉಳಿಪಾಡಿಗುತ್ತು ಮಾತನಾಡಿದರು.
ಕಡತ ವಿಲೇವಾರಿಗೆ ಅಧಿಕಾರಿಗಳು ವಿಶೇಷ ಒತ್ತು ನೀಡಿದಾಗ ಸರ್ಕಾರದ ಕಾರ್ಯಕ್ರಮ ಯಶಸ್ವಿಯಾಗುವುದರ ಜೊತೆಗೆ ಜನಸಾಮಾನ್ಯರಿಗೂ ಪ್ರಯೋಜನವಾಗುತ್ತದೆ ಎಂದು ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಹೇಳಿದ್ದಾರೆ.
ಇಲ್ಲಿನ ಬಿ.ಸಿ.ರೋಡು ಮಿನಿ ವಿಧಾನಸೌಧದಲ್ಲಿ ಶನಿವಾರ ನಡೆದ ತಾಲ್ಲೂಕು ಮಟ್ಟದ ಕಡತ ವಿಲೇವಾರಿ ಸಪ್ತಾಹ-೨೦೨೨ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ತಹಶೀಲ್ದಾರ್ ರಶ್ಮಿ ಎಸ್.ಆರ್., ಪುರಸಭಾ ಉಪಾಧ್ಯಕ್ಷೆ ಜೆಸಿಂತಾ ಡಿಸೋಜಾ, ಬೂಡಾ ಅಧ್ಯಕ್ಷ ಬಿ.ದೇವದಾಸ್ ಶೆಟ್ಟಿ, ತಾಲ್ಲೂಕು ಪಂಚಾಯಿತಿ ಇಒ ರಾಜಣ್ಣ, ಕ್ಷೇತ್ರ ಶಿಕ್ಷಣಾಧಿಕಾರಿ ಜ್ಞಾನೇಶ್, ಹಿರಿಯ ತೋಟಗಾರಿಕಾ ಸಹಾಯಕ ನಿರ್ದೇಶಕ ಪ್ರದೀಪ್ ಡಿಸೋಜ, ಕೃಷಿ ಸಹಾಯಕ ನಿರ್ದೇಶಕ ಚೆನ್ನಕೇಶವಮೂರ್ತಿ, ಪುರಸಭೆ ಮುಖ್ಯಾಧಿಕಾರಿ ಲೀನಾ ಬ್ರಿಟ್ಟೋ, ಬಂಟ್ವಾಳ ಸಿಡಿಪಿಒ ಗಾಯತ್ರಿ ಕಂಬಳಿ, ವಿಟ್ಲ ಸಿಡಿಪಿಒ ಉಷಾ ಡಿ, ಮೆಸ್ಕಾಂ ಎಇಇ ಪ್ರಶಾಂತ್ ಪೈ, ಉಪನೋಂದಣಾಧಿಕಾರಿ ಕವಿತಾ ಎ.ಸಿ., ಪ್ರಾದೇಶಿಕ ಸಾರಿಗೆ ಇಲಾಖೆ ಅಧಿಕಾರಿ ಚರಣ್, ಸ್ಥಾನೀಯ ಶಿರಸ್ತೇದಾರ್ ನರೇಂದ್ರನಾಥ್ ಮಿತ್ತೂರು, ಉಪತಹಶೀಲ್ದಾರ್ ದಿವಾಕರ ಮುಗುಲ್ಯ, ವಿಜಯ ವಿಕ್ರಮ್, ಕಂದಾಯ ನಿರೀಕ್ಷಕ ವಿಜಯ್ ಆರ್., ಸಂತೋಷ್, ಪ್ರಶಾಂತ್ ಶೆಟ್ಟಿ ಇದ್ದರು.