ಬಂಟ್ವಾಳ; ಮಾನಸಿಕವಾಗಿ ಅಸ್ವಸ್ಥಗೊಂಡಿದ್ದ ವೃದ್ದ ಮಹಿಳೆಯೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬರಿಮಾರು ಗ್ರಾಮದಲ್ಲಿ ನಡೆದಿದೆ. ಇಲ್ಲಿನ ಬಲ್ಯ ನಿವಾಸಿ ಸೆಲಿನ್ ಪಿಂಟೋ(54) ಆತ್ಮಹತ್ಯೆ ಮಾಡಿಕೊಂಡವರು. ಕಳೆದ ಕೆಲದಿನಗಳಿಂದ ಇವರು ಮಾನಸಿಕವಾಗಿ ಅಸ್ವಸ್ಥಗೊಂಡಿದ್ದಾರೆನ್ನಲಾಗಿದ್ದು, ಜೀವನದಲ್ಲಿ ಜಿಗೂಪ್ಸೆಗೊಂಡು ಈ ಕೃತ್ಯವೆಸಗಿರಬಹುದೆಂದು ಶಂಕಿಸಲಾಗಿದೆ. ಬಂಟ್ವಾಳ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
