ಬಂಟ್ವಾಳ: ಮಿನಿ ವಿಧಾನಸೌಧದ ಸಭಾಂಗಣದಲ್ಲಿ ಇಂದು ಶುಕ್ರವಾರ ಬಂಟ್ವಾಳ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವತಿಯಿಂದ ಶಂಕರಾಚಾರ್ಯರ ಜಯಂತಿ ಆಚರಣೆಯನ್ನು ಆಚರಿಸಲಾಯಿತು.
ಕೇಂದ್ರ ಸ್ಥಾನಿಯ ಶಿರಸ್ತೇದಾರ್ ನರೇಂದ್ರನಾಥ್ ಮಿತ್ತೂರು ಅವರು ಸಭೆಯ ಅಧ್ಯಕ್ಷತೆ ವಹಿಸಿ ದೀಪ ಬೆಳಗಿಸಿ ಸನಾತನ ಭಾರತದ ಸಾಂಸ್ಕೃತಿಯನ್ನು ಜಗತ್ತಿಗೆ ಸಾರಿದವರಲ್ಲಿ ಶಂಕರಾಚಾರ್ಯರು ಮೊದಲಿಗರು. ಇವರು ಅದ್ವೈತ ಸಿದ್ಧಾಂತವನ್ನು ಪ್ರತಿಪಾದಿಸಿದರು.ಆ ಕಾಲದಲ್ಲಿ ಇತರ ಮತಗಳ ದಾಳಿಯನ್ನು ತಡೆಯುವಲ್ಲಿ ಪ್ರಮುಖ ಪಾತ್ರ ವಹಿಸಿದರು ಎಂದು ಹೇಳಿದರು.
ಈ ಸಂದರ್ಭದಲ್ಲಿ ಉಪತಹಸೀಲ್ದಾರ್ ರಾಜೇಶ್ ನಾಯ್ಕ್, ತಾಲೂಕು ಕಚೇರಿ ಸಿಬ್ಬಂದಿಗಳು ಗ್ರಾಮ ಲೆಕ್ಕಾಧಿಕಾರಿಗಳು ಗ್ರಾಮ ಸಹಾಯಕರು ಉಪಸ್ಥಿತರಿದ್ದರು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವಿಷಯ ನಿರ್ವಾಹಕ ವಿಷು ಕುಮಾರ್ ಸ್ವಾಗತಿಸಿ ವಂದಿಸಿದರು.