ಬಂಟ್ವಾಳ: ಬೆಂಗಳೂರಿನ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಕ್ರೀಡಾ ಇಲಾಖೆ ಮತ್ತು ಯುವ ಸಬಲೀಕರಣ ಇಲಾಖೆ ವತಿಯಿಂದ ನಡೆಯುತ್ತಿರುವ ರಾಜ್ಯ ಮಿನಿ ಒಲಂಪಿಕ್ ಕ್ರೀಡಾಕೂಟದ ಜುಡೋ ಸ್ಪರ್ಧೆ ಇದರ ೩೫ ಕೆ.ಜಿ. ವಿಭಾಗದಲ್ಲಿ ಜಿಲ್ಲೆಯನ್ನು ಪ್ರತಿನಿಧಿಸಿದ ನೆತ್ತರಕೆರೆ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿ ಹಂಸಿಕಾ ಬೆಳ್ಳಿ ಪದಕ ಗೆದ್ದುಕೊಂಡಿದ್ದಾರೆ.
ಇವರು ಪೊಳಲಿ ಶ್ರೀ ರಾಮಕೃಷ್ಣ ತಪೋವನದಲ್ಲಿ ಅಸ್ಮಿತಾ ಬಿ. ರೈ ಕಲ್ಲಡ್ಕ ಅವರಿಂದ ತರಬೇತಿ ಪಡೆಯುತ್ತಿದ್ದು, ಈಕೆ ನೆತ್ತರಕೆರೆ ನಿವಾಸಿ ರಾಜೇಶ್ ಮತ್ತು ಶೋಭಾ ದಂಪತಿ ಪುತ್ರಿ. ಈಕೆಗೆ ಪೊಳಲಿ ಶ್ರೀ ರಾಮಕೃಷ್ಣ ತಪೋವನದ ವಿವೇಕಾ ಚೈತನ್ಯಾನಂದ ಸ್ವಾಮೀಜಿ ಅಭಿನಂದನೆ ವ್ಯಕ್ತಪಡಿಸಿದ್ದಾರೆ.