ಬಂಟ್ವಾಳ: ತಾಲ್ಲೂಕಿನ ಬಿ.ಸಿ.ರೋಡು ರಾಷ್ಟ್ರೀಯ ಹೆದ್ದಾರಿ ಮೇಲ್ಸೇತುವೆ ಬಳಿ ಕಾಂಗ್ರೆಸ್ ಕಾರ್ಮಿಕ ಘಟಕ ವತಿಯಿಂದ ಬುಧವಾರ ನಡೆದ ಪ್ರತಿಭಟನೆಯಲ್ಲಿ ಮಾಜಿ ಸಚಿವ ಬಿ.ರಮಾನಾಥ ರೈ ಮಾತನಾಡಿದರು. ಪಿಯೂಸ್ ಎಲ್.ರಾಡ್ರಿಗಸ್, ಬೇಬಿ ಕುಂದರ್, ಸುದೀಪ್ ಕುಮಾರ್ ಶೆಟ್ಟಿ ಮತ್ತಿತರರು ಇದ್ದಾರೆ.15btl-Congress

ಈ ಹಿಂದೆ ಕಾಂಗ್ರೆಸ್ ಸರ್ಕಾರ ನೀಡಿದ ವಿವಿಧ ಜನಪ್ರಿಯ ಯೋಜನೆಗಳಿಗೆ ಹೆಸರು ಬದಲಾಯಿಸಿದ್ದು ಬಿಟ್ಟರೆ ಬಿಜೆಪಿ ನೇತೃತ್ವದ ಕೇಂದ್ರ ಮತ್ತು ರಾಜ್ಯ ಸರ್ಕಾರವು ಕಾರ್ಮಿಕರು ಸಹಿತ ಜನ ಸಾಮಾನ್ಯರಿಗೆ ಏನು ಹೊಸ ಕೊಡುಗೆ ನೀಡಿದೆ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಪ್ರಶ್ನಿಸಿದ್ದಾರೆ.

ಇಲ್ಲಿನ ಬಿ.ಸಿ.ರೋಡು ರಾಷ್ಟ್ರೀಯ ಹೆದ್ದಾರಿ ಮೇಲ್ಸೇತುವೆ ಬಳಿ ಸರ್ಕಾರದ ಜನವಿರೋಧಿ ನೀತಿ ವಿರುದ್ಧ ಬಂಟ್ವಾಳ ಮತ್ತು ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಕಾರ್ಮಿಕ ಘಟಕ ವತಿಯಿಂದ ಬುಧವಾರ ನಡೆದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.

ಶೇ.೪೦ರಷ್ಟು ಕಮಿಷನ್ ಪಡೆಯುವ ಬಿಜೆಪಿ ನಾಯಕರು ಮತ್ತು ವಲಸೆ ಬಂದಿರುವ ಬಿಜೆಪಿಗರ ಮನೆಗೆ ಯಾವುದೇ ದಾಳಿ ನಡೆಯುತ್ತಿಲ್ಲ. ಆದರೆ ಕಾಂಗ್ರೆಸ್ ನಾಯಕರ ಮನೆಗಳಿಗೆ ಮಾತ್ರ ಸರ್ಕಾರದ ಆಣತಿಯಂತೆ ಅನಗತ್ಯ ದಾಳಿ ನಡೆಸಿ ಸ್ವಾಯತ್ತೆ ಸಂಸ್ಥೆಗಳನ್ನು ದುರ್ಬಲಗೊಳಿಸುಲಾಗುತ್ತಿದೆ ಎಂದು ಆರೋಪಿಸಿದರು.

ಜಿಲ್ಲಾ ಕಾರ್ಮಿಕ ಘಟಕ ಅಧ್ಯಕ್ಷ ಲಾರೆನ್ಸ್ ಡಿ’ಸೋಜ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರಾದ ಎಂ.ಎಸ್.ಮಹಮ್ಮದ್, ಚಂದ್ರಪ್ರಕಾಶ ಶೆಟ್ಟಿ, ಬಂಟ್ವಾಳ ಮತ್ತು ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬೇಬಿ ಕುಂದರ್, ಸುದೀಪ್ ಕುಮಾರ್ ಶೆಟ್ಟಿ, ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಮಾಜಿ ಸದಸ್ಯ ಪಿಯೂಸ್ ಎಲ್.ರಾಡ್ರಿಗಸ್, ಜಿಲ್ಲಾ ಅಸಂಘಟಿತ ಕಾರ್ಮಿಕ ಸಂಘದ ಅಧ್ಯಕ್ಷ ಅಬ್ಬಾಸ್ ಅಲಿ, ಕಿಸಾನ್ ಘಟಕ ಜಿಲ್ಲಾಧ್ಯಕ್ಷ ಮೋಹನ ಗೌಡ ಕಲ್ಮಂಜ, ಬೂಡ ಮಾಜಿ ಅಧ್ಯಕ್ಷ ಸದಾಶಿವ ಬಂಗೇರ, ಮುಖಂಡ ಪಿ.ಎ.ರಹೀಂ ಮಾತನಾಡಿದರು.
ಕಾರ್ಮಿಕ ಕಾಂಗ್ರೆಸ್ ಘಟಕ ಅಧ್ಯಕ್ಷ ಮನೋಹರ್ ನೇರಂಬೋಳು, ಎಪಿಎಂಸಿ ಮಾಜಿ ಅಧ್ಯಕ್ಷ ಕೆ.ಪದ್ಮನಾಭ ರೈ, ಪುರಸಭೆ ಉಪಾಧ್ಯಕ್ಷೆ ಜೆಸಿಂತಾ ಡಿಸೋಜ, ಪ್ರಮುಖರಾದ ಉಮೇಶ್ ನೆಲ್ಲಿಗುಡ್ಡೆ, ಪುರುಷೋತ್ತಮ ಪೂಜಾರಿ, ಸಿದ್ಧಿಕ್ ಗುಡ್ಡೆಯಂಗಡಿ, ಲೋಲಾಕ್ಷ ಶೆಟ್ಟಿ, ವಾಸು ಪೂಜಾರಿ, ದಯಾನಂದ್ ನೇರಂಬೋಳು, ಯುವ ಕಾಂಗ್ರೆಸ್ ಅಧ್ಯಕ್ಷ ಇಬ್ರಾಹಿಂ ನವಾಝ್, ಸುರೇಶ್ ಜೋರ, ಅಲ್ಬರ್ಟ್ ಮಿನೇಜಸ್, ಯೂಸುಫ್ ಕರಂದಾಡಿ, ಜಗದೀಶ್ ಕೊಯಿಲ, ವೆಂಕಪ್ಪ ಪೂಜಾರಿ ಮತ್ತಿತರರು ಇದ್ದರು.

By suddi9

Leave a Reply

Your email address will not be published. Required fields are marked *