ಬಂಟ್ವಾಳ: ತಾಲ್ಲೂಕಿನ ಸಿದ್ಧಕಟ್ಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸ್ವಾತಂತ್ರ್ಯ ಅಮೃತ ಮಹೋತ್ಸವ ಪ್ರಯುಕ್ತ ಗುರುವಾರ ಏರ್ಪಡಿಸಿದ್ದ ಹರ್ ಘರ್ ತಿರಂಗ ಅಭಿಯಾನ ಕಾರ್ಯಕ್ರಮದಲ್ಲಿ ‘ಅಬತರ’ ತುಳು ಚಲನಚಿತ್ರ ತಂಡದ ಕಲಾವಿದರಿಗೆ ರಾಷ್ಟ್ರಧ್ವಜ ವಿತರಿಸಲಾಯಿತು.

ಪ್ರಾಂಶುಪಾಲ ಡಾ.ಶ್ರೀನಿವಾಸ, ಕಲಾವಿದರಾದ ದೇವದಾಸ್ ಕಾಪಿಕಾಡ್, ಅರ್ಜುನ್ ಕಾಪಿಕಾಡ್, ಗಾನ ಭಟ್, ಅರವಿಂದ್ ಬೋಳಾರ್, ಭೋಜರಾಜ್ ವಾಮಂಜೂರ್, ಮನೀಷ್ ಶೆಟ್ಟಿ, ಯೋಜನಾಧಿಕಾರಿ ಡಾ.ಸುಂದ್ರೇಶ ಎನ್. ಮತ್ತಿತರರು ಇದ್ದರು.