ಬಂಟ್ವಾಳ: ಶ್ರೀರಾಮ ಸೆಕೆಂಡರಿ ಸ್ಕೂಲ್‌ನಲ್ಲಿ ಬಂಟ್ವಾಳ ತಾಲೂಕು ಮಟ್ಟದ ಪುಟ್ಬಾಲ್ ಪಂದ್ಯಾಟ ನಡೆಯಿತು. ಈ ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀ ರಾಮ ವಿದ್ಯಾಕೇಂದ್ರದ ಸಹಸಂಚಾಲಕರಾದ ರಮೇಶ್ ಅವರು ಉದ್ಘಾಟಿಸಿ, ವಿದ್ಯಾರ್ಥಿಗಳಿಗೆ ಕ್ರೀಡೆಗಳು ಪೂರಕವಾಗಿದ್ದು ವಿದ್ಯಾರ್ಥಿಗಳು ಕ್ರೀಡೆಗಳಲ್ಲಿ ಸ್ಪರ್ಧಿಸಿ ಕ್ರೀಡಾ ಮನೋಭಾವದಿಂದ ಆಡುವ ಮೂಲಕ ಗೆಲುವು ಸಾಧಿಸಬೇಕು ಎಂದರು.

ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ದಕ್ಷಿಣ ಕನ್ನಡ ಜಿಲ್ಲಾ ದೈಹಿಕ ಶಿಕ್ಷಣ ಪರಿವೀಕ್ಷಕರಾದ ವಿಷ್ಣು ಹೆಬ್ಬಾರ್, ಶ್ರೀರಾಮ ಪದವಿಪೂರ್ವ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ಶ್ರೀ ಕರುಣಾಕರ ಉಪಸ್ಥಿತರಿದ್ದರು. ಶ್ರೀರಾಮ ಸೆಕೆಂಡರಿ ಸ್ಕೂಲ್‌ನ ಆಂಗ್ಲ ಭಾಷಾ ಶಿಕ್ಷಕಿ ಶ್ವೇತ ಇವರು ಕಾರ್ಯಕ್ರಮವನ್ನು ನಿರೂಪಿಸಿ ವಂದಿಸಿದರು

By suddi9

Leave a Reply

Your email address will not be published. Required fields are marked *