ಬಂಟ್ವಾಳ: ಇಲ್ಲಿನ ಬೊಳ್ಳಾಯಿಯಲ್ಲಿ ಪ್ರಧಾನ ಕಚೇರಿ ಹೊಂದಿರುವ ಸಜಿಪಮುನ್ನೂರು ಮೂರ್ತೇದಾರರ ಸೇವಾ ಸಹಕಾರಿ ಸಂಘದ ವಾಷರ್ಿಕ ಮಹಾಸಭೆ ಇದೇ 18ರಂದು ಬೆಳಿಗ್ಗೆ 11 ಗಂಟೆಗೆ ಸಜಿಪ ಮೂಡ ಸುಭಾಷ್ ನಗರ ಶ್ರೀ ಗುರು ಕಲ್ಯಾಣ ಮಂಟಪದಲ್ಲಿ ನಡೆಯಲಿದೆ.
ಇದೇ ವೇಳೆ ಶೇ.75ಕ್ಕಿಂತ ಗರಿಷ್ಟ ಅಂಕ ಗಳಿಸಿದ ಸಂಘದ ಸದಸ್ಯರ ಮಕ್ಕಳಿಗೆ ವಿದ್ಯಾರ್ಥಿ ವೇತನ ವಿತರಣೆ ನಡೆಯಲಿದ್ದು, ಆಸಕ್ತರು ಇದೇ 15ರೊಳಗೆ ಸಂಘದ ಕಚೇರಿಯಿಂದ ಅರ್ಜಿ ಪಡೆದು ಸಲ್ಲಿಸಬೇಕು ಎಂದು ಸಂಘದ ಅಧ್ಯಕ್ಷ ಕೆ ಸಂಜೀವ ಪೂಜಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.