ಮೂಡುಬಿದರೆ: ಜೈನ ಯಕ್ಷಗಾನ ಪ್ರಸಂಗಕರ್ತ, ಯಕ್ಷಗಾನ ಕಲಾವಿದ ದಿ.ಯಂ.ಶ್ರೀಧರ ಪಾಂಡಿ ಸಾಣೂರು 3ನೇ ವರ್ಷದ ಸಂಸ್ಮರಣಾ ಸಮಾರಂಭ ಇರ್ವತ್ತೂರು ಶ್ರೀ ಆದಿನಾಥ ಸ್ವಾಮಿ ಬಸದಿಯಲ್ಲಿ ಭಾನುವಾರ ನಡೆಯಿತು.
ದಿ.ಯಂ.ಶ್ರೀಧರ ಪಾಂಡಿ ಸಂಸ್ಮರಣಾ ಪ್ರಶಸ್ತಿಯನ್ನು ಜಗದೀಶ ಆಚಾರ್ಯ ಅವರಿಗೆ ಪ್ರದಾನ ಮಾಡಲಾಯಿತು.

ಶ್ರೀಧರ ಪಾಂಡಿ ಸಂಸ್ಮರಣಾ ಪ್ರಶಸ್ತಿಯನ್ನು ಹಿರಿಯ ಯಕ್ಷಗಾನ ಕಲಾವಿದ ಜಗದೀಶ ಆಚಾರ್ಯ ಅವರಿಗೆ ನೀಡಿ ಗೌರವಿಸಲಾಯಿತು. ರಾಜ್ಯೋತ್ಸವ ಪ್ರಶಸ್ತಿ ವಿಜೇತ, ಪ್ರಥಮ ಯಕ್ಷಮಂಗಲ ಪ್ರಶಸ್ತಿ ವಿಜೇತ ಕೆ.ರಾಘವ ನಂಬಿಯಾರ್ ಅವರನ್ನು ಅಭಿನಂದಿಸಲಾಯಿತು. ಮೂಡುಬಿದರೆ ಜೈನ ಮಠದ ಸ್ವಸ್ತಿಶ್ರೀ ಭಟ್ಟಾರಕ ಚಾರುಕೀತರ್ಿ ಸ್ವಾಮೀಜಿ ಆಶೀರ್ವಚನ ನೀಡಿದರು.
ಹಿರಿಯ ಯಕ್ಷಗಾನ ಅರ್ಥಧಾರಿ ಪ್ರಭಾಕರ ಜೋಶಿ, ನಿವೃತ್ತ ಪ್ರಾಂಶುಪಾಲ ಪ್ರೊ.ಕೆ.ಗುಣಪಾಲ ಕಡಂಬ, ವಕೀಲ ನಮಿರಾಜ ಪಾಂಡಿ ಉಪಸ್ಥಿತರಿದ್ದರು.
ಅಧ್ಯಾಪಕ ಮುನಿರಾಜ ರೆಂಜಾಳ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕಿ ಜಯಶ್ರೀ ವಂದಿಸಿದರು.