ಬಂಟ್ವಾಳ:ಬಂಟ್ವಾಳ-ಮೂಡುಬಿದ್ರೆ ರಸ್ತೆ ನಡುವಿನ ಸೋರ್ನಾಡು ಎಂಬಲ್ಲಿ ಕಿರಿದಾಗಿರುವ ಸೇತುವೆಗೆ ಬದಲಾಗಿ ರೂ 60ಲಕ್ಷ ವೆಚ್ಚದ ನೂತನ ಸೇತುವೆ ನಿರ್ಮಾಣ ಕಾಮಗಾರಿಗೆ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಅವರು ಶನಿವಾರ ಗುದ್ದಲಿಪೂಜೆ ನೆರವೇರಿಸಿದ್ದಾರೆ.
ಇದೇ ವೇಳೆ ರೂ 1.70ಕೋಟಿ ವೆಚ್ಚದಲ್ಲಿ ಬಂಟ್ವಾಳ ಪೇಟೆ-ಪಾಣೆಮಂಗಳೂರು ಸಂಪರ್ಕ ರಸ್ತೆ ಮತ್ತು ಸೇತುವೆ ಪುನರ್ ನಿರ್ಮಾಣ ಕಾಮಗಾರಿ, ರೂ 1.25ಕೋಟಿ ವೆಚ್ಚದಲ್ಲಿ ಪಾಣೆಮಂಗಳೂರು ಪೇಟೆ ಸೇತುವೆ ಪುನರ್ನಿರ್ಮಾಣ ಕಾಮಗಾರಿ,ರೂ.45ಲಕ್ಷ ವೆಚ್ಚದಲ್ಲಿ ಮೆಲ್ಕಾರ್-ಪಣೋಲಿಬೈಲು ರಸ್ತೆ ನಡುವಿನ ಕಾರಾಜೆ ಸೇತುವೆ ಪುನರ್ನಿರ್ಮಾಣ ಕಾಮಗಾರಿಗೆ ಶನಿವಾರ ಗುದ್ದಲಿ ಪೂಜೆ ನೆರವೇರಿಸಿದರು.

22btl-sornad

ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಕೆ.ಮಾಯಿಲಪ್ಪ ಸಾಲ್ಯಾನ್, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅಬ್ಬಾಸ್ ಆಲಿ, ಜಿ.ಪಂ.ಸದಸ್ಯ ಚಂದ್ರಪ್ರಕಾಶ ಶೆಟ್ಟಿ, ತಾ.ಪಂ.ಸದಸ್ಯ ಎಪ್ರಿಯಂ ಸಿಕ್ವೇರ, ಕಾಂಗ್ರೆಸ್ ಮುಖಮಡ ಪಿಯೂಸ್ ಎಲ್.ರಾಡ್ರಿಗಸ್, ಪುರಸಭಾಧ್ಯಕ್ಷೆ ವಸಂತಿ, ಉಪಾಧ್ಯಕ್ಷೆ ಯಾಸ್ಮಿನ್, ಸದಸ್ಯರಾದ ಪ್ರವೀಣ ಜಕ್ರಿಬೆಟ್ಟು, ಜಗದೀಶ ಕುಂದರ್, ಪ್ರಭಾ ಸಾಲ್ಯಾನ್, ಚಂಚಲಾಕ್ಷಿ, ಮಹಮ್ಮದ್ ಇಕ್ಬಾಲ್, ಮುಖ್ಯಾಧಿಕಾರಿ ಲೀನಾ ಬ್ರಿಟ್ಟೊ, ಎಂಜಿನಿಯರ್ ಉಮೇಶ್ ಭಟ್, ಅರುಣ್ ಪ್ರಕಾಶ್ ಮತ್ತಿತರರು ಇದ್ದರು.

By suddi9

Leave a Reply

Your email address will not be published. Required fields are marked *