ಬಂಟ್ವಾಳ:ಕಳೆದ 1953ರಲ್ಲಿ ಅವಿಭಜಿತ ದಕ್ಷಿಣಕನ್ನಡ ಜಿಲ್ಲೆ ಮಾತ್ರವಲ್ಲದೆ ಕಾಸರಗೋಡು ಸಹಿತ ತಾಳೆ ಮತ್ತು ತೆಂಗು ಬೆಲ್ಲ ತಯಾರಿಕೆಗಾಗಿ ಮಂಗಳೂರಿನಲ್ಲಿ ದಿ.ದಾಮೋದರ ಸುವರ್ಣ ನೇತೃತ್ವದಲ್ಲಿ ಆರಂಭಗೊಂಡ ಜಿಲ್ಲಾ ಮೂತರ್ೆದಾರರ ಮಹಾಮಂಡಲ ಕಚೇರಿ ಇದೇ 23ರಂದು ಬೆಳಿಗ್ಗೆ ಬಿ.ಸಿ.ರೋಡ್ಗೆ ಸ್ಥಳಾಂತರಗೊಂಡು ಶುಭಾರಂಭಗೊಳ್ಳಲಿದೆ.

ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ, ಡಿಸಿಸಿ ಬ್ಯಾಂಕಿನ ಅಧ್ಯಕ್ಷ ಎಂ.ಎನ್.ರಾಜೇಂದ್ರ ಕುಮಾರ್, ನಗರಾಭಿವೃದ್ಧಿ ಸಚಿವ ವಿನಯಕುಮಾರ್ ಸೊರಕೆ, ಆರೋಗ್ಯ ಸಚಿವ ಯು.ಟಿ.ಖಾದರ್, ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಪುರಸಭಾ ಅಧ್ಯಕ್ಷೆ ವಸಂತಿ, ಸಹಕಾರ ಸಂಘಗಳ ಉಪನಿಬಂಧಕ ಬಿ.ಕೆ.ಸಲೀಂ, ಬಿಲ್ಲವ ಮುಖಂಡ ಕೆ.ಸೇಸಪ್ಪ ಕೋಟ್ಯಾನ್ ಮತ್ತಿತರ ಗಣ್ಯರು ಭಾಗವಹಿಸುವರು.

ಬಂಟ್ವಾಳ ತಾಲ್ಲೂಕಿನ ಬಿ.ಸಿ.ರೋಡ್ನಲ್ಲಿ ಜಿಲ್ಲಾ ಮೂರ್ತೆ ದಾರರ ಸಹಕಾರಿ ಮಹಾಮಂಡಲ ನೂತನ ಕಚೇರಿ ಉದ್ಘಾಟನೆಗೆ ಸಿದ್ಧಗೊಂಡಿದೆ.
22btl-murthe

22btl-murthe-1
ಜಿಲ್ಲಾ ಮಟ್ಟದಲ್ಲಿ ಮೂರ್ತೆದಾರಿಕೆಯಂತಹ ಕುಲ ಕಸುಬು ಉಳಿಸಿ ಬೆಳೆಸುವುದರ ಜೊತೆಗೆ ತೆಂಗಿನ ಮರದಿಂದ ನೀರಾ ಇಳಿಸಿ ನೀರಾ ಸಂಸ್ಕರಣಾ ಘಟಕದಲ್ಲಿ ಸಂಗ್ರಹಿಸಿ ಬಳಿಕ ಸಹಕಾರಿ ಸಂಘಗಳ ಮೂಲಕ ಮಾರಾಟ ಮಾಡಲು ಮಹಾಮಂಡಲ ಸಿದ್ಧತೆ ನಡೆಸಿದೆ.
ಈಗಾಗಲೇ ಜಿಲ್ಲೆಯಲ್ಲಿ ಒಟ್ಟು ಐದು ಸಾವಿರಕ್ಕೂ ಮಿಕ್ಕಿ ಸದಸ್ಯರನ್ನು ಹೊಂದಿದ್ದು, ಒಟ್ಟು 27 ಸಹಕಾರಿ ಸಂಘಗಳು ಈ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತಿವೆ. ಉಡುಪಿ ಜಿಲ್ಲೆಯಲ್ಲೂ ಒಟ್ಟು 16 ಸಹಕಾರಿ ಸಂಘಗಳು ರಚನಾತ್ಮಕವಾಗಿ ಕಾರ್ಯನಿರ್ವಹಿಸುತ್ತಿವೆ.
ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪ ಅವಧಿಯಲ್ಲಿ ‘ಮೂರುವವನೇ ಮಾರುವವನು’ ಯೋಜನೆಯಡಿ ಮಹಾಮಂಡಲಕ್ಕೆ ಸ್ವಾಯತ್ತತೆೆ ನೀಡಿದ್ದು, ಮಹಾಮಂಡಲ ಕಚೇರಿಗೆ ಸ್ವಂತ ಕಟ್ಟಡ ನಿರ್ಮಿಸಲು ಸರ್ಕಾರಿ ಜಾಗ ನೀಡುವಂತೆ ಮನವಿ ಸಲ್ಲಿಸಲು ಸಿದ್ಧತೆ ನಡೆಸಲಾಗಿದೆ ಎಂದು ಸಂಘದ ಜಿಲ್ಲಾಧ್ಯಕ್ಷ ಕೆ.ಸಂಜೀವ ಪೂಜಾರಿ ತಿಳಿಸಿದ್ದಾರೆ.

By suddi9

Leave a Reply

Your email address will not be published. Required fields are marked *