ಮಂಗಳೂರು : ಮಂಗಳೂರು ಪೊಲೀಸರು ಏಕಾಏಕಿ ಮಂಗಳೂರು ಜೈಲಿನ ಮೇಲೆ ಬೆಳ್ಳಂ ಬೆಳಗ್ಗೆ ದಾಳಿ ಮಾಡಿದ್ದು ನಿದ್ರೆಯಲ್ಲಿದ್ದ ಕೈದಿಗಳಿಗೆ ದಂಗುಬಡಿದಂತಾಗಿದೆ ಹಾಗೂ ಅಲ್ಲಿ ನಡೆಯುತ್ತಿದ್ದ ಅಕ್ರಮ ಬಯಲಾಗಿದೆ.

ಮುಂಜಾನೆ ನಾಲ್ಕು ಗಂಟೆಯ ವೇಳೆಗೆ ಜೈಲಿನ ಮೇಲೆ ಏಕಕಾಲದಲ್ಲಿ ನೂರೈವತ್ತಕ್ಕೂ ಅಧಿಕ ಪೊಲೀಸರು ದಾಳಿ ಮಾಡಿದ್ದು ಡ್ರಗ್ಸ್, ಗಾಂಜಾ ಪತ್ತೆಯ ಹಿನ್ನಲೆಯಲ್ಲಿ ತನಿಖೆಗೆ ಮಂಗಳೂರು ಪೊಲೀಸ್ ಕಮೀಷನರ್ ಅನುಪಮ್ ಅಗರ್ ವಾಲ್ ಆದೇಶ ಹೊರಡಿಸಿದ್ದಾರೆ.ದಾಳಿ ವೇಳೆ ಇಪ್ಪತ್ತೈದು ಮೊಬೈಲ್, ಒಂದು ಬ್ಲೂ ಟೂತ್ ಡಿವೈಸ್, ಐದು ಇಯರ್ ಫೋನ್, ಒಂದು ಪೆನ್ ಡ್ರೈವ್, ಐದು ಚಾರ್ಜರ್, ಒಂದು ಕತ್ತರಿ ಸೇರಿದಂತೆ ವಿವಿಧ ವಸ್ತುಗಳು ಸಿಕ್ಕಿದ್ದು ಪೊಲೀಸರು ಆ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ.

By suddi9

Leave a Reply

Your email address will not be published. Required fields are marked *